fbpx
ಸಮಾಚಾರ

‘ಅಮ್ಮ ಮತ್ತೆ ಹುಟ್ಟಿ ಬಾ’: ದುನಿಯಾ ವಿಜಯ್ ತಾಯಿ ವಿಧಿವಶ

ನಟ ದುನಿಯಾ ವಿಜಯ್ ತಾಯಿ ನಾರಾಯಣಮ್ಮ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಈ ಬಗ್ಗೆ ದುನಿಯಾ ವಿಜಯ್​ ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

 

 

ನಾರಾಯಣಮ್ಮ ಅವರ ಆರೋಗ್ಯ ಇತ್ತೀಚೆಗೆ ಗಂಭೀರವಾಗಿತ್ತು. ಹೀಗಾಗಿ ಕಳೆದ ಕಳೆದ 20 ದಿನಗಳಿಂದ ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿತ್ತು. ಚಿಕಿತ್ಸೆ ಫಲಿಸದೇ ಈಗ ನಾರಾಯಣಮ್ಮಅವರು ಮನೆಯಲ್ಲೇ ಕೊನೆಯುಸಿರು ಎಳೆದಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಕೊವಿಡ್ನಿಂದ ದುನಿಯಾ ವಿಜಯ್ ತಾಯಿ ಚೇತರಿಸಿಕೊಂಡಿದ್ದರು. ಇನ್ನೇನು ಸಮಸ್ಯೆ ಬಗೆಹರಿಯಿತು ಎನ್ನುತ್ತಿರುವಾಗಲೇ ಮತ್ತೆ ತಾಯಿಯ ಆರೋಗ್ಯ ಹದಗೆಟ್ಟಿತ್ತು. ಬ್ರೇನ್ ಸ್ಟ್ರೋಕ್ ಆದ ಕಾರಣ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು, ಪ್ರತಿದಿನ ಮನೆಗೆ ಬಂದು ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top