fbpx
ಸಮಾಚಾರ

“ರೆಕ್ಕೆ ಪುಕ್ಕ ಅಲ್ಲ, ತಲೆಯನ್ನೇ ಕಟ್ ಮಾಡ್ತೀನಿ” ನಟ ದರ್ಶನ್ ವಾರ್ನಿಂಗ್

ನಟ ದರ್ಶನ್ ತೂಗುದೀಪ ಅವರಿಗೆ ಸೇರಿದ ಮೈಸೂರಿನ ಆಸ್ತಿ ಪತ್ರಗಳನ್ನು ಫೋರ್ಜರಿ ಮಾಡಿ, ದರ್ಶನ್ ಸ್ನೇಹಿತರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಘಟನೆಗೆ ಸಂಭಂದಿಸಿದಂತೆ ನಟ ದರ್ಶನ್ ಗುಡುಗಿದ್ದಾರೆ., ಯಾರೇ ನನ್ನ ಹೆಸರನ್ನು ದುರುಪಯೋಗ ಪಡಿಸಿಕೊಂಡರು ಅವರ ರೆಕ್ಕೆಯನ್ನಲ್ಲ, ತಲೆಯನ್ನೆ ತೆಗೆಯುತ್ತೇನೆ ಎಂದು ದರ್ಶನ್ ಎಚ್ಚರಿಕೆ ನೀಡಿದ್ದಾರೆ.

ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ದರ್ಶನ್ ಅವರು ‘ನೋಡಿ ನನಗೆ ಯಾರೂ ಬ್ಲಾಕ್ ಮೇಲ್ ಮಾಡಿಲ್ಲ, ಆದರೆ ನನ್ನ ಮೇಲೆ ಸುಮ್ಮನೆ ಗೂಬೆ ಕೂರಿಸುವ ಪ್ರಯತ್ನ ನಡೆದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದು, ಅನಂತರ ಏನಾಗುತ್ತದೆ ಎಂಬುದನ್ನು ನಿಮಗೆ ಸಂಪೂರ್ಣ ವಿವರ ಕೊಡುತ್ತೇನೆ ಎಂದು ಹೇಳಿದರು.

ನನ್ನ ಆಸ್ತಿ ಪತ್ರಗಳು ಫೋರ್ಜರಿ ಆಗಿರುವ ವಿಚಾರ 1 ತಿಂಗಳ ಹಿಂದೆ ತಿಳಿದಿತ್ತು. ಬಂಧಿತ ಆರೋಪಿ ಬಾಯಿ ಬಿಟ್ಟರೆ ಎಲ್ಲವೂ ಗೊತ್ತಾಗುತ್ತದೆ. ಪೊಲೀಸರು ಠಾಣೆ ಕರೆದಿದ್ದಕ್ಕೆ ಹೋಗಿದ್ದೆ. ಸ್ನೇಹಿತರಿಂದಲೇ ಮೋಸವಾಗಿದೆ ಎಂದು ತಿಳಿದಿದ್ದೇ ಆದರೆ, ಯಾರನ್ನೂ ಬಿಡುವುದಿಲ್ಲ. ನನ್ನ ಹೆಸರು ಬಳಕೆಯಾಗಿದೆ. ಅದ್ದರಿಂದಲೇ ಪೊಲೀಸ್ ಠಾಣೆಗೆ ಹೋಗಿದ್ದೆ. ಇದಕ್ಕೆ ರೆಕ್ಕೆಪುಕ್ಕ ಬೆಳೆಸೋದು ಬೇಡ. ಯಾರೂ ಎಂದು ತಿಳಿಯಲಿ ರೆಕ್ಕೆಪುಕ್ಕವಲ್ಲ, ತಲೆಯನ್ನೇ ಕಡಿಯೋನು ಎಂದು ನಿಮಗೆಲ್ಲರಿಗೂ ಗೊತ್ತು ಎಂದು ಗುಡಿಗಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top