fbpx
ಸಮಾಚಾರ

ರಾಕ್‍ಲೈನ್ ವೆಂಕಟೇಶ್ ಮನೆ ಮೇಲೆ ದಾಳಿ: ಗಾಜು ಪುಡಿ ಪುಡಿ

ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಮನೆ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ. ಜುಲೈ 11ರ ನಸುಕಿನ ಜಾವ 2:56ಕ್ಕೆ ಬೈಕಿನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ಮದ್ಯದ ಬಾಟಲನ್ನು ಮನೆಗೆ ಎಸೆದು ಪರಾರಿಯಾಗಿದ್ದಾರೆ. ಬಾಟೆಲ್ ಎಸೆದ ರಭಸಕ್ಕೆ ಗಾಜು ಒಡೆದು ಪುಡಿ ಪುಡಿಯಾಗಿದೆ.

ಈ ಘಟನೆಯ ಬಗ್ಗೆ ಸ್ವತಃ ರಾಕ್ ಲೈನ್ ವೆಂಕಟೇಶ್ ಅವರೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಘಟನೆಯ ಬಗ್ಗೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

“ಇಲ್ಲಿಯವರೆಗೆ ಇದು ಹೋಗುತ್ತದೆ ಅಂತ ಗೊತ್ತಿರಲಿಲ್ಲ. ನಾವು ಸುಮ್ಮನಿದ್ದರೂ ನಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಹೀಗಾಗಿ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಕುಟುಂಬದವರಿಗೆ ತಿಳಿಸಿದ್ದೇನೆ” ಎಂದು ರಾಕ್ ಲೈನ್ ವೆಂಕಟೇಶ್ ಮಾಹಿತಿ ನೀಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top