fbpx
ಸಮಾಚಾರ

ನಟ ದರ್ಶನ್ ನಿಂದ ದಲಿತ ಸಪ್ಲೈಯರ್ ಮೇಲೆ ಹಲ್ಲೆ: ಬಾಂಬ್ ಸಿಡಿಸಿದ ಇಂದ್ರಜಿತ್ ಲಂಕೇಶ್

ತನ್ನ ಹೇಳಿಕೆಗಳ ಮೂಲಕ ಕನ್ನಡ ಚಲನಚಿತ್ರರಂಗದಲ್ಲಿ ಹಲವು ವಿವಾದಗಳನ್ನ ಎಬ್ಬಿಸಿರುವ ಖ್ಯಾತ ನಿರ್ದೇಶಕ ಮತ್ತು ನಟ ಇಂದ್ರಜಿತ್ ಲಂಕೇಶ್ ಇಂದು ಹೊಸ ಬಾಂಬ್ ಸಿಡಿಸಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಲಂಕೇಶ್ ಗಂಭೀರ ಆರೋಪ ಮಾಡಿದ್ಧಾರೆ.

ಮೈಸೂರಿನಲ್ಲಿರುವ ಸಂದೇಶ್ ನಾಗರಾಜ್ ಅವರ ಸಂದೇಶ್ ಪ್ರಿನ್ಸ್ ಹೋಟೆಲ್​ನಲ್ಲಿ ದರ್ಶನ್ ಮತ್ತವರ ಗ್ಯಾಂಗ್​ನವರು ಹೋಟೆಲ್​ನ ವೇಟರ್​ವೊಬ್ಬನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಆ ವೇಟರ್ ಒಬ್ಬ ದಲಿತ ವ್ಯಕ್ತಿಯಾಗಿದ್ದಾನೆ ಎಂದು ಇಂದ್ರಜಿತ್ ಲಂಕೇಶ್ ಆಪಾದನೆ ಮಾಡಿದ್ದಾರೆ. ದಲಿತ ವ್ಯಕ್ತಿಯ ಮೇಲೆ ಹಲ್ಲೆ ಆಗಿದ್ದರೂ ದರ್ಶನ್ ಮತ್ತವರ ಸಹಚರರ ವಿರುದ್ಧ ಮೈಸೂರು ಪೊಲೀಸರು ಯಾವ ಕ್ರಮವನ್ನೂ ಕೈಗೊಂಡಿಲ್ಲವೆಂದು ಲಂಕೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂದೇಶ್ ಪ್ರಿನ್ಸ್ ಹೋಟೆಲ್‌ನಲ್ಲಿ ದಲಿತ ಸಪ್ಲೈಯರ್ ಮೇಲೆ ಹಲ್ಲೆ ಹಾಗೂ ದರ್ಶನ್ ಅವರ ಫೇಕ್ ಲೋನ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಇಂದ್ರಜಿತ್ ಲಂಕೇಶ್ ಭೇಟಿ ಮಾಡಿದರು. ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ಹಾಗೂ ಸಾಮಾನ್ಯರಿಗೆ ನ್ಯಾಯ ಒದಗಿಸುವಂತೆ ಗೃಹ ಸಚಿವರ ಬಳಿ ಇಂದ್ರಜಿತ್ ಲಂಕೇಶ್ ಮನವಿ ಮಾಡಿದ್ದಾರೆ.

ಗೃಹ ಸಚಿವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳ ಜೊತೆಗೆ ಇಂದ್ರಜಿತ್ ಲಂಕೇಶ್ “ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲಿನಲ್ಲಿ ದಲಿತ ವೇಟರ್ ಮೇಲೆ ದರ್ಶನ್ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ವೇಟರ್ ಕಣ್ಣುಗಳಿಗೆ ಹಾನಿಯಾಗಿದೆ. ಈ ಘಟನೆಯ ಸಂದರ್ಭದಲ್ಲಿ ದರ್ಶನ್, ರಾಕೇಶ್, ಹರ್ಷ ಮೇಲಾಂಟ, ಮತ್ತು ಪವಿತ್ರ ಗೌಡ ಇರುತ್ತಾರೆ. ಘಟನೆಯ ಬಳಿಕ 50 ಸಾವಿರ ರೂ. ನೀಡಿ ರಾಜಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top