fbpx
ಸಮಾಚಾರ

“ಕುಟುಂಬದಲ್ಲಿ ಉಂಟಾದ ಗೊಂದಲ ಬಗೆಹರಿದಿದೆ” ಮೇಘಾ ಶೆಟ್ಟಿ ಸ್ಪಷ್ಟನೆ

ಕಿರುತೆರೆಯಲ್ಲಿ ಅನು ಸಿರಿಮನೆ ಎಂದೇ ಖ್ಯಾತರಾಗಿರುವ ಮೇಘಾ ಶೆಟ್ಟಿ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಅನಿರುದ್ಧ್​ ಅವರೊಂದಿಗೆ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಜೋಡಿಯ ಅಭಿನಯಕ್ಕೆ ಸಾಕಷ್ಟು ಮಂದಿ ಫಿದಾ ಆಗಿದ್ದಾರೆ. ಮೇಘ ಜೊತೆ ಜೊತೆಯಲಿ ಧಾರಾವಾಹಿಯಿಂದ ಹೊರ ಬಂದಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಈಗ ಮೇಘಾ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.

ನಾನು ಧಾರಾವಾಹಿಯಲ್ಲಿ ನಟಿಸುತ್ತಿಲ್ಲ ಎನ್ನುವ ಸುದ್ದಿ ನಾಲ್ಕೈದು ದಿನಗಳಿಂದ ಹರಿದಾಡಿತ್ತು. ಕುಟುಂಬ ಎಂದಾಗ ಗೊಂದಲ ಸಹಜವಾಗಿರುತ್ತದೆ. ಈಗ ಗೊಂದಲ ಬಗೆಹರಿದಿದೆ. ಜೊತೆ ಜೊತೆಯಲಿ ಧಾರಾವಾಹಿ ಮುಗಿಯುವ ತನಕ ಅನು ಸಿರಿಮನೆ ಪಾತ್ರವನ್ನು ನಾನೇ ಮಾಡುತ್ತೇನೆ. ಈ ಗೊಂದಲದಿಂದ ವೀಕ್ಷಕರಲ್ಲಿ ಆತಂಕ ಉಂಟಾಗಿತ್ತು. ಈ ಬಗ್ಗೆ ಎಲ್ಲ ವೀಕ್ಷಕರಲ್ಲೂ ಕ್ಷಮೆ ಕೇಳುತ್ತಿದ್ದೇನೆ. ಇನ್ನು ಮುಂದೆ ಈ ರೀತಿ ಆಗಲ್ಲ ಎಂದು ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ.

ಮುಂದೆ ಈ ರೀತಿ ಸುದ್ದಿ ಕೇಳಿ ಬಂದರೆ ಅದಕ್ಕೆ ಗಮನಕೊಡಬೇಡಿ. ಮುಂದೆಯೂ ಇದೇ ರೀತಿ ಬೆಂಬಲಕೊಡಿ. ಜೊತೆ ಜೊತೆಯಲಿ ಧಾರಾವಾಹಿಯಿಂದ ನಾನು ಸಾಕಷ್ಟು ಪಡೆದುಕೊಂಡಿದ್ದೇನೆ. ಅದಕ್ಕೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ವಿಶ್ವಾಸ ಹೀಗೆ ಇರಲಿ ಎಂದು ಅಭಿಮಾನಿಗಳಲ್ಲಿ ಕೋರಿದ್ದಾರೆ ಅವರು.

ಮೇಘಾ ಶೆಟ್ಟಿ ಪ್ರಸ್ತುತ ಗೋಲ್ಡನ್ ಸ್ಟಾರ್ ಗಣೇಶ್ ಜೊತೆಗೆ ‘ತ್ರಿಬ್ಬಲ್ ರೈಡಿಂಗ್’ ಸಿನಿಮಾ ಮಾಡುತ್ತಿದ್ದಾರೆ. ಹೀಗಾಗಿ ಅವರು ಸಿನಿಮಾಗಳತ್ತ ಹೆಚ್ಚು ಗಮನ ನೀಡುತ್ತಿದ್ದಾರೆ. ಧಾರಾವಾಹಿಗೆ ಸಮಯ ಕೊಡಲು ಆಗೋದಿಲ್ಲ ಎಂದು ಧಾರಾವಾಹಿ ಬಿಡುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗಿತ್ತು. ಇನ್ನು ಅವರಿಗೆ ಬೇರೆ ಬೇರೆ ಸಿನಿಮಾ ಆಫರ್‌ಗಳು ಹುಡುಕಿಕೊಂಡು ಬರುತ್ತಿವೆಯಂತೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top