fbpx
ಸಮಾಚಾರ

“ದರ್ಶನ್ ಅವ್ರೆ, ನಾನು ಕರಿಯ ಸಿನಿಮಾ ಮಾಡ್ಬೇಕಾದ್ರೆ ಪುಡಂಗುನೂ ಅಲ್ಲಾ, ನಂಗ್ ಕೊಂಬು ಇರ್ಲಿಲ್ಲ” ದಚ್ಚುಗೆ ಪ್ರೇಮ್ ತಿರುಗೇಟು

ನಟ ದರ್ಶನ್ ಮೈಸೂರಿನಲ್ಲಿ ಸಡೆಸಿದ ಸುದ್ದಿಗೋಷ್ಠಿಯಲ್ಲಿ ಉಮಾಪತಿ ಶ್ರೀನಿವಾಸ್ ಅವರನ್ನು ಜೋಗಿ ಪ್ರೇಮ್ ಪರಿಚಯ ಮಾಡಿಸಿದ್ದರು. ಸಿನಿಮಾ ಡೇಟ್ ವಿಚಾರಕ್ಕೆ ಪ್ರೇಮ್ ಏನ್ ಪುಡಂಗಾ? ಪ್ರೇಮ್‌ಗೆ ಎರಡು ಕೊಂಬು ಇದೆಯಾ? ‘ಕರಿಯ’ ಸಿನಿಮಾ ಟೈಮ್‌ನಲ್ಲಿ ಪ್ರೇಮ್ ಏನು ಅಂತ ನೋಡಿದ್ದೇವೆ ಎಂದು ದರ್ಶನ್ ಹೇಳಿದ್ದರು. ಆ ಮಾತು ಕೇಳಿ ಮನನೊಂದ ಪ್ರೇಮ್ ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ದರ್ಶನ್‌ರಿಗೆ ಒಂದಷ್ಟು ಮಾತು ಹೇಳಿದ್ದಾರೆ.

 

 

ಪ್ರೇಮ್ ಅವರ ಪೋಸ್ಟ್ ಈ ರೀತಿ ಇದೆ:
ದರ್ಶನ್ ಅವ್ರೆ, ನಾನು ಕರಿಯ ಸಿನಿಮಾ ಮಾಡ್ಬೇಕಾದ್ರೆ ಯಾವ್ ಪುಡಂಗುನೂ ಅಲ್ಲಾ ನಂಗ್ ಕೊಂಬು ಇರ್ಲಿಲ್ಲ.. ನಾನೊಬ್ಬ ಸಾಮಾನ್ಯ ನಿರ್ದೇಶಕ. ರಾಜಕುಮಾರ್ ರವರು, ಅಂಬರೀಷ್ ರವರು, ವಿಷ್ಣುವರ್ಧನ್ ರವರು ಹಾಗೂ ರಜನಿಕಾಂತ್ ರವರು ಒಬ್ಬ ಒಳ್ಳೆ ನಿರ್ದೇಶಕ ಅಂದು ಬೆನ್ನು ತಟ್ಟಿದ್ರು. ಇಡೀ ಕರ್ನಾಟಕ ಜನತೆ ಹರಸಿ ಹಾರೈಸಿ ಹ್ಯಾಟ್ರಿಕ್ ನಿರ್ದೇಶಕ ಅಂತ ಬಿರುದು ಕೊಟ್ಟಾಗ್ಲು ನನಗ್ ಕೊಂಬು ಬರ್ಲಿಲ್ಲ.. ನಾನು ನಂದೇ ಆದ್ ಸ್ಟೈಲ್ ನಲ್ಲಿ ಸಿನಿಮಾ ಮಾಡ್ಕೊಂಡು ಬಂದೋವ್ನು..

ಸುಮಾರು ನಿರ್ಮಾಪಕರುಗಳು ಹಾಗೂ ನಿಮ್ಮ ಅಭಿಮಾನಿಗಳು ಹಾಗೂ ನನ್ನ ಅಭಿಮಾನಿಗಳು ಪ್ರತಿ ಸಾರಿ ದರ್ಶನ್ ಹಾಗೂ ನಿಮ್ಮ ಕಾಂಬಿನೇಶನ್ ನಲ್ಲಿ ಯಾವಾಗ ಚಿತ್ರ ಮಾಡ್ತಿರಂತ ಕೇಳ್ತಾನೆಯಿದ್ರು. ಇದ್ರ ಬಗ್ಗೆ ನಿಮಗೂ ಗೊತ್ತು ನನಗು ಗೊತ್ತು. ಇಬ್ಬರು ಸೇರಿ ಸಿನಿಮಾ ಮಾಡೋದ್ರ ಬಗ್ಗೆ ಚೆರ್ಚೆ ಮಾಡಿದ್ವಿ. ನಾನು ನಮ್ ಬ್ಯಾನರ್ ನಲ್ ಸಿನಿಮಾ ಮಾಡಿ ಇಲ್ಲಾ ನಿಮ್ ಬ್ಯಾನರ್ ನಲ್ ಸಿನಿಮಾ ಮಾಡೋಣ ಅಂತ ಮತ್ತೆ ಚರ್ಚೆ ಮಾಡಿದ್ವಿ. ಆದರೆ ನನಗೆ ಉಮಾಪತಿಯವರು, ನೀವು ಹಾಗೂ ದರ್ಶನ್ ಸೇರಿ ನಂಗ್ ಸಿನಿಮಾ ಮಾಡ್ಕೊಡಿ ಅಂತ ಅಂದ್ರು. ಅದಿಕ್ಕೆ ನಾನು ಉಮಾಪತಿ ಅವ್ರನ್ನ ನಿಮಗೆ ಪರಿಚಯ ಮಾಡಿ.. ಮೂರು ಜನ ಸೇರಿ ಸಿನಿಮಾ ಮಾಡೋಣ ಅಂತ ಡಿಸೈಡ್ ಮಾಡಿದ್ವಿ.. ಆದ್ರೆ ನನ್ ದಿ ವಿಲ್ಲನ್ ಸಿನಿಮಾ ಲೇಟ್ ಆದ ಕಾರಣ ನಾನೇ ಉಮಾಪತಿಯವರಿಗೆ ದರ್ಶನ್ ಅವ್ರ ಡೇಟ್ ಇದ್ದ ಕಾರಣ ಬೇರೆ ನಿರ್ದೇಶಕರನ್ನ ಹಿಡಿದು ಸಿನಿಮಾ ಮಾಡಿ ಅಂತ ಹೇಳಿದ್ದೆ.. ನನ್ನ ಸಂಭಾವನೆಯನ್ನ ಉಮಾಪತಿಯವರಿಗೆ ವಾಪಾಸ್ ನೀಡಿ ರಾಬರ್ಟ್ ಸಿನಿಮಾ ಗೆ ಹಾರೈಸಿದವನು ನಾನು.. ಅದೇ ರೀತಿ ರಾಬರ್ಟ್ ಚಿತ್ರ ಹಿಟ್ ಆಯ್ತು, ಎಲ್ಲರ ಹಾಗೇ ನಾನು ಖುಷಿ ಪಟ್ಟೆ..

ಇದ್ರ ಮದ್ಯೆ ನನ್ ಹೆಸ್ರು ಯಾಕೆ.. ದರ್ಶನ್ ಅವ್ರೆ ನಿರ್ದೇಶಕ್ರು ಯಾವ್ ಪುಡಂಗಿಗಳು ಅಲ್ಲಾ, ಅವ್ರಿಗೆ ಕೊಂಬು ಇರಲ್ಲ.. ತೆರೆಮೇಲೆ ಒಬ್ಬ ನಟನನ್ನ ಹುಟ್ಟಾಕಿ ಅವ್ನಿಗ್ ಕೊಂಬು ಬರ್ಬೇಕಾದ್ರೆ ನಿರ್ದೇಶಕನ ಶ್ರಮ ಎಷ್ಟಿರುತ್ತೆಂತ ಪ್ರತಿಯೊಬ್ಬ ಕಲಾವಿದರಿಗೂ ಗೊತ್ತು ಅದು ನಿಮ್ಗೂ ಗೊತ್ತು.. ದಯವಿಟ್ಟು ಇನ್ನೊಬ್ರ ಬಗ್ಗೆ ಮಾತಾಡ್ಬೇಕಾದ್ರೆ ಯೋಚಿಸಿ ಮಾತಾಡಿ ದರ್ಶನ್ ಅವರೇ… Thank you for your kind words. ದೇವ್ರು ನಿಮಗೆ ಒಳ್ಳೇದ್ ಮಾಡ್ಲಿ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top