fbpx
ಸಮಾಚಾರ

Exclusive: ಜುಲೈ 26ಕ್ಕೆ ಸಿಎಂ ಯಡಿಯೂರಪ್ಪ ರಾಜೀನಾಮೆ?

ರಾಜ್ಯ ರಾಜಕಾರಣದಲ್ಲಿನ ಬೆಳವಣಿಗೆಗಳು ಭಾರೀ ಸಂಚಲನ ಮೂಡಿಸುತ್ತಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡುವ ಕಾಲ ಸನ್ನಿಹಿತವಾಯಿತಾ ಎಂಬ ಪ್ರಶ್ನೆ ಬಲವಾಗಿ ಕಾಡಲಾರಂಭಿಸಿದೆ.

ಬಿಜೆಪಿ ಸರ್ಕಾರ ರಚನೆಯಾದ ಎರಡನೇ ವರ್ಷದ ದಿನದಂದೇ ಬಿ.ಎಸ್.ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ಜುಲೈ 26ರಂದು ರಾಜ್ಯಪಾಲರನ್ನು ಸಿಎಂ ಯಡಿಯೂರಪ್ಪ ಭೇಟಿ ಆಗಲಿದ್ದು, ಅವತ್ತೇ ತಾಂತ್ರಿಕವಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ನಾಯಕತ್ವ ಬದಲಾವಣೆಯಾಗಲಿದೆ ಎನ್ನುವ ಊಹಾಪೋಹಗಳಿಗೆ ಇಂಬು ಕೊಡುವಂತೆ ಜುಲೈ 26ಕ್ಕೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ಹೇಳಲಾಗುತ್ತಿದೆ. ಏಕೆಂದರೆ ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಏರಿ ಜುಲೈ 26 ಕ್ಕೆ ಎರಡು ವರ್ಷ ಪೂರೈಸಲಿದ್ದಾರೆ. ಆದ ಕಾರಣ ಶಾಸಕಾಂಗದ ಸಭೆ ಕರೆದಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಬಿಜೆಪಿ ಹೈಕಮಾಂಡ್‌ ನಿರ್ಧರಿಸಬೇಕಿದೆ. ಆದರೆ ಜುಲೈ 26 ರೊಳಗೆ ನಾಯಕತ್ವದ ಬದಲಾವಣೆಯ ವೇಳೆಗಾಗಲೇ ಮತ್ತೊಬ್ಬ ಸಮರ್ಥ ವ್ಯಕ್ತಿಯನ್ನು ಹುಡುಕುವುದು ಬಿಜೆಪಿಗೆ ಸವಾಲಾಗಿ ಪರಿಣಮಿಸಿದೆ. ಏಕೆಂದರೆ ಇದುವರೆಗೂ ಮುಂದಿನ ಮುಖ್ಯಮಂತ್ರಿ ಯಾರು ಎಂಬುವುದು ಇನ್ನೂ ತೀರ್ಮಾನ ಆಗಿಲ್ಲ ಎಂದು ರಾಜಕೀಯ ವಲಯದಲ್ಲಿ ಸುದ್ದಿ ಹರಿದಾಡುತ್ತಿದೆ.

ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಸಹ ಯಡಿಯೂರಪ್ಪನವರ ರಾಜೀನಾಮೆ ಫಿಕ್ಸ್ ಎಂದು ಹೇಳಿತ್ತು. ರಾಜೀನಾಮೆ ಪ್ರಕ್ರಿಯೆ ಆರಂಭವಾಗಿರುವ ಕುರಿತ ಮಾತುಗಳು ಆಡಿಯೋದಲ್ಲಿವೆ. ಮುಂದಿನ ಸಿಎಂ ಯಾರು ಆಗ್ತಾರೆ ಅನ್ನೋದರ ಬಗ್ಗೆ ಕೆಲ ಹೆಸರುಗಳು ಮುನ್ನಲೆಗೆ ಬಂದಿವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top