fbpx
ಸಮಾಚಾರ

ಬಿಎಸ್‍ವೈಯನ್ನು ಸಿಎಂ ಸ್ಥಾನದಿಂದ ಇಳಿಸಿದರೆ ಬಿಜೆಪಿ ಲಿಂಗಾಯತರ ಅವಕೃಪೆಗೆ ತುತ್ತಾಗುತ್ತದೆ” ಸಿಎಂ ಪರ ಎಂಬಿ ಪಾಟೀಲ್ ಬ್ಯಾಟಿಂಗ್

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ.

 

 

ಈ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಗೊಳಿಸಿದರೆ, ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ ಎಂದು ಹೇಳಿದ್ದಾರೆ. ಮುಂದುವರಿದು, ಯಡಿಯೂರಪ್ಪನವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆಯ ಸುದ್ದಿ ಹಲವಾರು ದಿನಗಳಿಂದ ಹರಿದಾಡುತ್ತಿತ್ತು. ಈ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದೀಗ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಈ ಕುರಿತಾಗಿ ಗಣ್ಯರು, ನಾಯಕರು ತಮ್ಮ ಅಭಿಪ್ರಾಯಗಳನ್ನು ಟ್ವೀಟ್ ಮಾಡುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top