fbpx
ಸಮಾಚಾರ

ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅರೆಸ್ಟ್

ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಸೋಮವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ. ನೀಲಿ ಸಿನಿಮಾಗಳನ್ನು ಮಾಡಿ ಅದನ್ನು ಬೇರೆಬೇರೆ ಆ್ಯಪ್​ಗಳಲ್ಲಿ ಅಪ್​ಲೋಡ್​ ಮಾಡುತ್ತಿದ್ದ ಆರೋಪದ ಮೇಲೆ ರಾಜ್​ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಈ ವಿಚಾರ ಶಿಲ್ಪಾ ಶೆಟ್ಟಿ ಅಭಿಮಾನಿಗಳಿಗೆ ಅಕ್ಷಕರಶಃ ಶಾಕ್​ ನೀಡಿದೆ.

ಕೆಂಡ್ರಿಂಗ್​ ಹೆಸರಿನ ಇಂಗ್ಲೆಂಡ್​ ಮೂಲದ ಕಂಪನಿ ಮೇಲೆ ರಾಜ್​ 10 ಕೋಟಿ ಹೂಡಿಕೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಉಮೇಶ್ ಎಂಬಾತನನ್ನು ಬಂಧಿಸಲಾಗಿದೆ. ಕುಂದ್ರಾ ಹಾಗೂ ಉಮೇಶ್​ ನಡುವೆ ಒಪ್ಪಂದ ಇತ್ತು ಎನ್ನಲಾಗಿದೆ.

‘ಅಶ್ಲೀಲ ಚಿತ್ರಗಳ ತಯಾರಿ ಮತ್ತು ಅವುಗಳನ್ನು ಕೆಲವು ಅಪ್ಲಿಕೇಶನ್‌ಗಳ ಮೂಲಕ ಬಿತ್ತರಿಸುತ್ತಿರುವ ಬಗ್ಗೆ 2021ರ ಫೆಬ್ರುವರಿಯಲ್ಲಿ ಮುಂಬೈನ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿತ್ತು. ರಾಜ್ ಕುಂದ್ರಾ ಅವರನ್ನು ಈ ಪ್ರಕರಣದಲ್ಲಿ ನಾವು ಸೋಮವಾರ ಬಂಧಿಸಿದ್ದೇವೆ. ಅವರು ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ಈ ಬಗ್ಗೆ ನಮ್ಮ ಬಳಿ ಸಾಕಷ್ಟು ಪುರಾವೆಗಳಿವೆ’ ಎಂದು ಮುಂಬೈ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತನಿಖೆ ಮುಂದುವರಿದಿರುವುದಾಗಿ ಅವರು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top