fbpx
ಸಮಾಚಾರ

ಭಾರತ ರತ್ನ ನಮ್ಮ ತಂದೆಯ ಕಾಲಿನ ಧೂಳಿಗೂ ಸಮವಿಲ್ಲ: ನಂದಮುರಿ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ

ಸದಾ ವಿವಾದಾತ್ಮಕ ಹೇಳಿಕೆ ನೀಡುವುದರ ಮೂಲಕವೇ ಟ್ರೋಲ್‍ಗೆ ಒಳಗಾಗುವ ತೆಲುಗು ಹಿರಿಯ ನಟ ಹಾಗೂ ರಾಜಕಾರಣಿ ನಂದಮುರಿ ಬಾಲಕೃಷ್ಣ ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ.

ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಯಾರೆಂದು ನನಗೆ ಗೊತ್ತಿಲ್ಲ. ಭಾರತ ರತ್ನ ನನ್ನ ತಂದೆ ಎನ್.ಟಿ.ರಾಮರಾವ್ ಅವರ ಕಾಲಿನ ಬೆರಳಿನ ಉಗುರಿಗೆ ಸಮ ಎಂದಿದ್ದಾರೆ. ಈ ಮೂಲಕ ಸಖತ್ ಟ್ರೋಲ್‍ಗೆ ಒಳಗಾಗಿದ್ದಾರೆ.

ತೆಲುಗು ಚಾನೆಲ್ ಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ನಂದಮೂರಿ ಬಾಲಕೃಷ್ಣ ಎ.ಆರ್. ರೆಹಮಾನ್ ಅವರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ನಂದಮೂರಿ ಬಾಲಕೃಷ್ಣ, ಎ.ಆರ್. ರೆಹಮಾನ್ ಯಾರು ಎಂಬುದೇ ನನಗೆ ಗೊತ್ತಿಲ್ಲ. ಅವರು ಆಸ್ಕರ್ ಪ್ರಶಸ್ತಿ ಪಡೆದಿದ್ದಾರೆಂದು ಕೇಳಿದ್ದೇನೆ. ಆದರೆ, ನನಗಿನ್ನೂ ಅವರು ಯಾರೆಂದೇ ಗೊತ್ತಾಗಿಲ್ಲ. ರೆಹಮಾನ್ ಎಲ್ಲೋ ಹತ್ತು ವರ್ಷಕ್ಕೊಂದು ಹಿಟ್ ಗೀತೆಯನ್ನು ಕೊಡುತ್ತಾರೆ ಅಷ್ಟೇ ಎನ್ನುವ ಮೂಲಕ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ನಟ ಬಾಲಕೃಷ್ಣ.

ಇದಿಷ್ಟೇ ಅಲ್ಲದೆ, ಭಾರತದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿಯ ಬಗ್ಗೆಯೂ ಲೇವಡಿ ಮಾಡುವ ಮೂಲಕ ನಂದಮೂರಿ ಬಾಲಕೃಷ್ಣ ವಿವಾದಕ್ಕೀಡಾಗಿದ್ದಾರೆ. ಭಾರತ ರತ್ನ ಪ್ರಶಸ್ತಿ ನನ್ನ ತಂದೆ ಎನ್​ಟಿಆರ್ ಅವರ ಕಾಲಿನ ಬೆರಳಿನ ಉಗುರಿಗೆ ಸಮಾನ. ಯಾವ ಪ್ರಶಸ್ತಿಗಳೂ ನಮ್ಮ ಕುಟುಂಬ ಟಾಲಿವುಡ್ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಮೀರಿಸಲು ಸಾಧ್ಯವಿಲ್ಲ. ನಮಗ್ಯಾರಿಗೂ ಪ್ರಶಸ್ತಿಗಳು ಬಂದಿಲ್ಲವೆಂದರೆ ಆ ಪ್ರಶಸ್ತಿಗಳೇ ಬೇಸರ ಮಾಡಿಕೊಳ್ಳಬೇಕೇ ಹೊರತು ನಾವಲ್ಲ ಎಂದು ಹೇಳಿದ್ದಾರೆ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top