fbpx
ಸಮಾಚಾರ

ದರ್ಶನ್​ ಬಗ್ಗೆ ನಾನು ಮಾತಾಡೋಕೆ ಇಷ್ಟ ಪಡಲ್ಲ: ಸಂಸದೆ ಸುಮಲತಾ..!

‘ದರ್ಶನ್ ಪ್ರಕರಣದ ಬಗ್ಗೆ ನಾನು ಈಗ ಮಾತನಾಡಲ್ಲ. ನಾನು ಈಗ ಏನೆ ಹೇಳಿದ್ರು ಬೇರೆ ದಾರಿಯಲ್ಲಿ ಹೋಗುತ್ತೆ’ ಎಂದು ಸಂಸದೆ ಹಾಗೂ ಚಿತ್ರನಟಿ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಅಕ್ರಮ ಗಣಿಗಾರಿಕೆ ಬಗ್ಗೆ ದೂರು ನೀಡಲು ಸುಮಲತಾ ರಾಜ್ಯಪಾಲರ ಭೇಟಿ ಮಾಡಿದ್ದು, ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಮನವಿ ಮಾಡಿದ್ದು, ಹೊಸದಾಗಿ ನೇಮಕರಾಗಿರುವ ರಾಜ್ಯಪಾಲರಿಗೆ ಸುಮಲತಾ ಶುಭಕೋರಿದ್ದಾರೆ. ಇದಾದ ಬಳಿಕ ಮಾತನಾಡಿದ ಸುಮಲತಾ ದರ್ಶನ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ದರ್ಶನ್ ಬಗ್ಗೆ ಪ್ರಶ್ನೆ ಮಾಡಿದಾಗ, ಸುಮಲತಾ ಈ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ. ಇನ್ನು ಹಲ್ಲೆ ಪ್ರಕರಣದ ಬಗ್ಗೆ ಮಾತನಾಡಿ, “ಪೊಲೀಸ್ ತನಿಖೆ ನಡೆಯುತ್ತಿದೆ. ಸತ್ಯಾಂಶ ಹೊರ ಬರಲಿ ಬಳಿಕ ಮಾತನಾಡುತ್ತೇನೆ” ಎಂದಿದ್ದಾರೆ.

25 ಕೋಟಿ ರೂ. ಸಾಲಕ್ಕೆ ಶ್ಯೂರಿಟಿ ಪ್ರಕರಣ ಬೆಳಕಿಗೆ ಬಂದ ನಂತರ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ನಡುವೆ ವೈಮನ್ಸು ಮೂಡಿತು. ಈ ಪ್ರಕರಣ ಮುಗಿಯುತ್ತಿದ್ದಂತೆ ಹೋಟೆಲ್ ಸಿಬ್ಬಂದಿ ಮೇಲೆ ದರ್ಶನ್ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top