fbpx
ಸಮಾಚಾರ

ಕೊನೆಗೂ ಟೀಂ ಇಂಡಿಯಾ 11ರ ಬಳಗದಲ್ಲಿ ಚಾನ್ಸ್ ಪಡೆದ ಪಡಿಕ್ಕಲ್: ಇಂದಿನ ಪಂದ್ಯದಲ್ಲಿ ಕನ್ನಡಿಗನಿಗೆ ಚೊಚ್ಚಲ ಅವಕಾಶ

ಕೊರೋನಾಂತಕದ ನಡುವೆಯೂ ಭಾರತ-ಶ್ರೀಲಂಕಾ ನಡುವಣ 2ನೇ ಟಿ20 ಪಂದ್ಯ ಶುರುವಾಗಿದೆ. ತಂಡದಲ್ಲಿ 4 ಹೊಸಮುಖಗಳಿಗೆ ಅವಕಾಶ ನೀಡಲಾಗಿದ್ದು, ಅದರಂತೆ ಈ ಪಂದ್ಯದ ಮೂಲಕ ಕನ್ನಡಿಗ ದೇವದತ್ ಪಡಿಕ್ಕಲ್ ಟೀಮ್ ಇಂಡಿಯಾ ಪರ ಪದಾರ್ಪಣೆ ಮಾಡಿದ್ದಾರೆ. ಹಾಗೆಯೇ ಅವರ ಜೊತೆ ಮತ್ತೋರ್ವ ಆರಂಭಿಕನಾಗಿ ರುತುರಾಜ್ ಗಾಯಕ್ವಾಡ್, ನಿತೀಶ್ ರಾಣಾ ಹಾಗೂ ಚೇತನ್ ಸಕರಿಯಾ ಕೂಡ ಚೊಚ್ಚಲ ಅವಕಾಶ ಪಡೆದಿದ್ದಾರೆ.

ಸೋಂಕಿತನ ಸಂಪರ್ಕಕ್ಕೆ ಬಂದಿದ್ದ 8 ಆಟಗಾರರು ಕೂಡ ಐಸೋಲೇಷನ್​​ಗೆ ಒಳಗಾಗಿದ್ದು, ತಂಡದಲ್ಲಿ 4 ಬದಲಾವಣೆ ಕಂಡಿದೆ.. ಜೊತೆಗೆ ತಂಡವನ್ನು ಭುವನೇಶ್ವರ್​​ ಕುಮಾರ್​ ಮುನ್ನಡೆಸುತ್ತಾರೆ ಎಂಬ ಗೊಂದಲಕ್ಕೂ ತೆರೆ ಬಿದ್ದಿದೆ.

ಕೃನಾಲ್ ಪಾಂಡ್ಯ ಅವರಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳವಾರದ ಪಂದ್ಯವನ್ನು ರದ್ದುಪಡಿಸಲಾಗಿತ್ತು. ಅಷ್ಟೇ ಅಲ್ಲದೆ ಪಾಂಡ್ಯ ಜೊತೆ ನೇರ ಸಂಪರ್ಕ ಹೊಂದಿದ್ದ ಆಟಗಾರರನ್ನು ಐಸೋಲೇಷನ್​ಗೆ ಒಳಪಡಿಸಲಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೃಷ್ಣಪ್ಪ ಗೌತಮ್, ಮನೀಶ್ ಪಾಂಡೆ ಮತ್ತು ಇಶಾನ್ ಕಿಶನ್ ಕಣಕ್ಕಿಳಿಯುತ್ತಿಲ್ಲ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top