fbpx
ಸಮಾಚಾರ

ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿರುವ ಗೋವಿಂದೇ ಗೌಡ ಆರೋಗ್ಯ ಸ್ಥಿತಿ ಬಗ್ಗೆ ಮಾಹಿನಿ ನೀಡಿದ ಜಗ್ಗೇಶ್: ಹೇಳಿದ್ದೇನು?

ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮೂಲಕ ಖ್ಯಾತಿ ಗಳಿಸಿದ್ದ ಯುವ ನಟ ಗೋವಿಂದೇಗೌಡ ಅಪಘಾತಕ್ಕೀಡಾಗಿದ್ದಾರೆ. ನೆನ್ನೆ ಸಂಜೆ ಚಿತ್ರೀಕರಣದ ವೇಳೆ ಅಪಘಾತ ಸಂಭವಿಸಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಟ ಗೋವಿಂದೇಗೌಡ ಅವರು, ಯೋಗರಾಜ್ ಭಟ್ ಅವರ ಸಿನಿಮಾದ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಟ ಗೋವಿಂದೇಗೌಡ ಅವರಿಗೆ ಅಪಘಾತ ಉಂಟಾಗಿತ್ತು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮೂಲಗಳ ಪ್ರಕಾರ ನಟ ಗೋವಿಂದೇಗೌಡ ಅವರಿಗೆ ಚಿತ್ರೀಕರಣದ ಸಂದರ್ಭದಲ್ಲಿ ಕಾರಿನ ಸಾಹಸ ದೃಶ್ಯದ ಶೂಟಿಂಗ್ ವೇಳೆಯಲ್ಲಿ ಹೊಟ್ಟೆಗೆ ಪೆಟ್ಟು ಬಿದ್ದಿರೋದಾಗಿ ತಿಳಿದು ಬಂದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ ಕಾರಣದಿಂದಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

 

 

ಗೋವಿಂದೇಗೌಡರ ಅಪಘಾತದ ಸುದ್ದಿಯನ್ನು ಸೋಷಿಯಲ್ ಮೀಡಿಯಾ ಮೂಲಕ ನಟ ಜಗ್ಗೇಶ್ ಖಚಿತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್, , ”ಕಾಮಿಡಿಕಿಲಾಡಿ ನಟ GG ಗೋವಿಂದೆಗೌಡನಿಗೆ ಚಿತ್ರಿಕರಣ ಸಮಯದಲ್ಲಿ ಅಪಘಾತವಾಗಿ BGS ಆಸ್ಪತ್ರೆಯಲ್ಲಿ ದಾಖಲಾಗಿರುವ ದಯಮಾಡಿ ಅವನಿಗೆ ಏನು ಆಗದಂತೆ ನೀವು ಪ್ರಾರ್ಥನೆ ಮಾಡಿ..ನಾನು ಗಣಪತಿಗೆ ಪ್ರಾರ್ಥಿಸಿ ಆಸ್ಪತ್ರೆಗೆ ಹೊರಟೆ” ಎಂದು ತಿಳಿಸಿದ್ದಾರೆ.

“ಗೋವಿಂದೇ ಗೌಡನನ್ನು ಭೇಟಿಯಾಗಿ ಟ್ವೀಟ್ ಮಾಡಿರುವ ನಟ ಜಗ್ಗೇಶ್, ಈಗ ತಾನೆ ಗೋವಿಂದೇ ಗೌಡನನ್ನ ಭೇಟಿ ಮಾಡಿದೆ.. ರಾಯರ ಆಶೀರ್ವಾದದಿಂದ ಕ್ಷೇಮವಾಗಿದ್ದಾನೆ.. ನಾನು, ಭಟ್ರು ಮತ್ತು ಶರಣ ಜೊತೆಗಿದ್ದೇವೆ.. ನಿಮ್ಮ ಹಾರೈಕೆಯಿರಲಿ..” ಎಂದು ಜಗ್ಗೇಶ್ ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top