ಬಿಗ್ ಬಾಸ್ ಕನ್ನಡ ಸೀಸನ್ 8ರ ಮುಗಿಯುವುದಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಮೂಲಗಳ ಪ್ರಕಾರ, ಆಗಸ್ಟ್ 8ರಂದು ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆ ನಡೆಯಲಿದೆ. ಸದ್ಯ ಮನೆಯಲ್ಲಿದ್ದ 9 ಮಂದಿಯಲ್ಲಿ ಐವರು ನಾಮಿನೇಟ್ ಆಗಿದ್ದರು. ಅದರಲ್ಲೀಗ ಚಕ್ರವರ್ತಿ ಚಂದ್ರಚೂಡ್ ಅವರು ಎಲಿಮಿನೇಟ್ ಆಗಿದ್ದಾರೆ. ವೈಲ್ಡ್ ಕಾರ್ಡ್ ಮೂಲಕ ಮನೆಯೊಳಗೆ ಎಂಟ್ರಿ ಪಡೆದಿದ್ದ ಚಕ್ರವರ್ತಿ, ಇದೀಗ ಆಟ ಮುಗಿಸಿ ಮನೆಯಿಂದ ಹೊರನಡೆದಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಒಂದು ಫೋನ್ ಬೂತ್ ಇಡಲಾಗಿದೆ. ಅದಕ್ಕೆ ಕರೆ ಮಾಡಿ ಒಂದು ಮೆಸೇಜ್ ನೀಡಲಾಯಿತು. ಶುಭಾ ಪೂಂಜಾ, ದಿವ್ಯಾ ಉರುಡುಗ, ಪ್ರಶಾಂತ್ ಸಂಬರಗಿ, ಶಮಂತ್ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್ ಅವರು ಫೋನ್ನಲ್ಲಿ ಮಾತನಾಡಿದರು. ಇಷ್ಟು ಜನರಲ್ಲಿ ಒಬ್ಬರಿಗೆ ಈಗ ಬಿಗ್ ಬಾಸ್ ಪಯಣ ಕೊನೆ ಆಗಲಿದೆ ಎಂದು ಸೂಚನೆ ನೀಡಲಾಯಿತು. ಪ್ರತಿಯೊಬ್ಬರೂ ಗೇಟ್ ಬಳಿ ಹೋಗಿ ನಿಲ್ಲಬೇಕು. ಯಾರಿಗೆ ಬಾಗಿಲು ತೆರೆಯುತ್ತದೆಯೋ ಅವರು ಎಲಿಮಿನೇಟ್ ಆದಂತೆ. ಈ ವೇಳೆ ಚಕ್ರವರ್ತಿಗೆ ಬಾಗಿಲು ತೆಗೆದಿದೆ.
ಸಾಮಾನ್ಯವಾಗಿ ವೀಕೆಂಡ್ನಲ್ಲಿ ಎಲಿಮಿನೇಟ್ ಆದವರನ್ನು ಸುದೀಪ್ ಅವರು ವೇದಿಕೆಗೆ ಕರೆಸಿ ಮಾತನಾಡಿಸುತ್ತಾರೆ. ಬಿಗ್ ಬಾಸ್ ಮನೆಯ ಅನುಭವವನ್ನು ಹಂಚಿಕೊಳ್ಳಲು ಅವಕಾಶ ನೀಡುತ್ತಾರೆ. ಆದರೆ ಇದು ವಿಡ್ವೀಕ್ ಎಲಿಮಿನೇಷನ್ ಆದಕಾರಣ ಸುದೀಪ್ ಅನುಪಸ್ಥಿತಿಯಲ್ಲೇ ಚಕ್ರವರ್ತಿ ಔಟ್ ಆಗಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
