fbpx
ಸಮಾಚಾರ

“ಇನ್ಮೇಲೆ ನಾನು ಸೂಪರ್ ಸಿಎಂ ಅಲ್ಲ” ವಿಜಯೇಂದ್ರ ತಿರುಗೇಟು

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಪದತ್ಯಾಗ ಮಾಡಿದ್ದರಿಂದ ನಾನು ಸೂಪರ್ ಸಿಎಂ ಟ್ಯಾಗ್ ನಿಂದ ಹೊರ ಬಂದಿರುವುದಕ್ಕೆ ಬಹಳ ಸಂತೋಷವಾಗಿದೆ ಎಂದು ಬಿಎಸ್ ವೈ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಾಕಾರರಿಗೆ ತಿರುಗೇಟು ನೀಡಿದರು.

ಸಿಎಂ ಬದಲಾಗಿದ್ದರಿಂದ ನಾನು ಸೂಪರ್ ಸಿಎಂ ಟ್ಯಾಗ್ ನಿಂದ ಹೊರಗೆ ಬಂದಿರೋದಕ್ಕೆ ಸಂತೋಷವಾಗಿದ್ದೇನೆ. ಮುಂದೆ ಪಕ್ಷದಲ್ಲಿ ಅಥವಾ ಸರ್ಕಾರದೊಳಗೆ ಕೆಲಸ ಮಾಡಬೇಕು ಎಂಬುದನ್ನ ಹೈಕಮಾಂಡ್ ನಿರ್ಧರಿಸಲಿದೆ. 17 ಜನರು ಪಕ್ಷ ಮತ್ತು ಯಡಿಯೂರಪ್ಪನವರನ್ನು ನಂಬಿಕೊಂಡು ಬಂದವರು. ಎಲ್ಲರನ್ನು ಪಕ್ಷ ಒಳ್ಳೆಯ ರೀತಿಯಲ್ಲಿ ನಡೆದುಕೊಳ್ಳುತ್ತೆ ಅನ್ನೋ ವಿಶ್ವಾಸವಿದೆ ಎಂದು ತಿಳಿಸಿದರು.

ಅಂದಹಾಗೆ ಪ್ರತಿಪಕ್ಷಗಳ ನಾಯಕರು ಮಾತ್ರವಲ್ಲ ಬಿಜೆಪಿಯ ಕೆಲವು ಶಾಸಕರೇ ಬಿ. ವೈ. ವಿಜಯೇಂದ್ರ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಇಲಾಖೆಗಳಲ್ಲಿ ಅವರು ಹಸ್ತಕ್ಷೇಪ ಮಾಡುತ್ತಾರೆ. ಯಡಿಯೂರಪ್ಪ ಸಿಎಂ ಆದರೆ ವಿಜಯೇಂದ್ರ ‘ಸೂಪರ್ ಸಿಎಂ’ ಎಂದು ಆರೋಪಿಸುತ್ತಿದ್ದರು. ಆ ನಿಟ್ಟಿನಲ್ಲಿ ವಿಜಯೇಂದ್ರ ಇಂದು ಹೇಳಿಕೆ ನೀಡಿದ್ದಾರೆ,.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top