fbpx
ಸಮಾಚಾರ

GR in VR : ವಿಕ್ರಾಂತ್ ರೋಣ ಚಿತ್ರತಂಡದಿಂದ ಬಿಗ್ ನ್ಯೂಸ್; ಜಾಕ್ವೆಲಿನ್ ದರ್ಶನಕ್ಕೆ ದಿನಾಂಕ ನಿಗದಿ

ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಚಿತ್ರ ‘ವಿಕ್ರಾಂತ್ ರೋಣ’ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಈಗಾಗಲೇ ಟೀಸರ್, ವಿಭಿನ್ನ ಪೋಸ್ಟರ್ಗಳ ಮೂಲಕ ಗಮನ ಸೆಳೆದಿರುವ ‘ವಿಕ್ರಾಂತ್ ರೋಣ’ ಚಿತ್ರವನ್ನು ತೆರೆ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಸಂಪೂರ್ಣವಾಗಿ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಇದೀಗ ಸಿನಿಮಾ ರಿಲೀಸ್ ಮಾಡುವತ್ತ ಗಮನಹರಿಸಿದೆ.

 

 

ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ವಿಕ್ರಾಂತ್ ರೋಣಾ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ತಿಳಿದಿರುವ ವಿಚಾರ. ಸಿನಿಮಾದಲ್ಲಿ ಅವರ ಪಾತ್ರದ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಲು ಚಿತ್ರತಂಡ ದಿನಾಂಕ ನಿಗದಿಪಡಿಸಿದೆ. ವಿಕ್ರಾಂತ್ ರೋಣಾದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಅವರ ಪಾತ್ರದ ಕುರಿತು ತಿಳಿಸಲಿದ್ದೇವೆ. ಈಗ ಅದಕ್ಕೆ ದಿನಾಂಕವನ್ನು ನಿಗದಿಪಡಿಸಲಾಗಿದೆ. ಜಾಕ್ವೆಲಿನ್ ಪಾತ್ರದ ಫಸ್ಟ್ ಲುಕ್‍ನ್ನು ಜುಲೈ 31ರಿಂದ ಜಿಆರ್ ಅನ್ನೋ ಹೆಸರು ಚಾಲ್ತಿಗೆ ಬರಲಿದೆ ಎಂದು ನಿರ್ದೇಶಕ ಅನೂಪ್ ಭಂಡಾರಿ ಟ್ವೀಟ್ ಮಾಡಿ ತಿಳಿಸಿದ್ದಾರೆ.

ಈ ಮೊದಲು ಜಾಕ್ವೆಲಿನ್ ಹಾಡಿಗೆ ಹೆಜ್ಜೆ ಹಾಕಿದ ಕುರಿತು ಮಾಹಿತಿ ಹಂಚಿಕೊಂಡಿದ್ದ ಅನೂಪ್ ಭಂಡಾರಿ, ‘ಜಾಕ್ವೆಲಿನ್​ ಅವರೇ ನಿಮಗೆ ಚಂದನವನಕ್ಕೆ ಸ್ವಾಗತ. ನಿಮ್ಮ ಜೊತೆ ಕೆಲಸ ಮಾಡಿದ್ದು ಖುಷಿ ನೀಡಿತು. ನಿಮ್ಮ ಪಾತ್ರದ ಹೆಸರು ಮತ್ತು ಫಸ್ಟ್​ಲುಕ್​ ಅನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು. ಪ್ರೇಕ್ಷಕರಿಗೆ ಇದು ಖಂಡಿತ ಇಷ್ಟವಾಗಲಿದೆ ಎಂಬ ನಂಬಿಕೆ ನನಗಿದೆ. ಡಬ್ಬಿಂಗ್​ ಸ್ಟುಡಿಯೋದಲ್ಲಿ ಮತ್ತೆ ಭೇಟಿ ಆಗೋಣ. ಅಲ್ಲಿಯವರೆಗೆ ಸ್ವಲ್ಪ ಜೋಪಾನ’ ಎಂದು ಅನೂಪ್​ ಭಂಡಾರಿ ಟ್ವೀಟ್​ ಮಾಡಿದ್ದರು. ಅಲ್ಲಿ ಒಂದು ಸುಳಿವನ್ನೂ ಬಿಟ್ಟುಕೊಟ್ಟಿದ್ದ ಅವರು- ‘ಸ್ವಲ್ಪ ಜೋಪಾನ’ ಎನ್ನುವುದು ಹಾಡಿನ ಸಾಲಾಗಿರಬಹುದು ಎಂಬಂತೆ ಅದನ್ನು ಉಲ್ಲೇಖಿಸಿದ್ದರು. ನಿಜವನ್ನು ತಿಳಿಯಲು ಹಾಡಿಗೆ ಕಾಯಬೇಕಾಗಿದ್ದರೂ ಸಹ, ಜಾಕ್ವೆಲಿನ್ ಪಾತ್ರ ಪರಿಚಯದ ದಿನಾಂಕವನ್ನು ಈಗ ಘೋಷಿಸಿರುವುದು ಅಭಿಮಾನಿಗಳಿಗೆ ಸ್ವಲ್ಪ ಸಮಾಧಾನ ನೀಡಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top