fbpx
ಸಮಾಚಾರ

ಮೇಕೆದಾಟು ಯೋಜನೆ ವಿರೋಧಿಸಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ಕೆ.ಅಣ್ಣಾಮಲೈ

ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ಜಟಾಪಟಿ ನಡೆಯುತ್ತಿದೆ. ತಮಿಳುನಾಡಿನ ಪ್ರತಿಪಕ್ಷ ಬಿಜೆಪಿ ಸಹ ರಾಜ್ಯ ಸರ್ಕಾರಕ್ಕೆ ಈ ವಿಚಾರದಲ್ಲಿ ಬೆಂಬಲ ನೀಡಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಮೇಕೆದಾಟು ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಅಣ್ಣಾಮಲೈ ನೇತೃತ್ವದಲ್ಲಿ ಆಗಸ್ಟ್ 5ರಂದು ಕರ್ನಾಟಕ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಅಣ್ಣಾಮಲೈ ತಿಳಿಸಿದ್ದಾರೆ. ಕರ್ನಾಟಕದ ನೂತನ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಡ್ಯಾಂ ನಿರ್ಮಿಸುವುದಾಗಿ ಹೇಳಿದ್ದಾರೆ. ನಾವು ಒಂದೇ ಪಕ್ಷದಲ್ಲಿದ್ದರೂ ಈ ನಿರ್ಧಾರ ವಿರೋಧಿಸುತ್ತೇವೆ. ಕರ್ನಾಟಕ ಸರ್ಕಾರದ ನಿರ್ಧಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿಕೆ ನೀಡಿದ್ದಾರೆ.

ಮೇಕೆದಾಟು ವಿಷಯವಾಗಿ ನಮ್ಮ ಪಕ್ಷದ ನಿಲುವು ಸ್ಪಷ್ಟವಾಗಿದೆ. ನಾವು ಈ ವಿಷಯವಾಗಿ ರಾಜಕೀಯ ಮಾಡಲು ಬಯಸುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಆಡಳಿತದ ಸರ್ಕಾರವಿದ್ದರೂ, ತಮಿಳುನಾಡು ಬಿಜೆಪಿ ಇಲ್ಲಿನ ಜನರ, ರೈತರ ಹಿತಾಸಕ್ತಿಯ ಪರವಾಗಿ ಕಾರ್ಯ ನಿರ್ವಹಿಸಲಿದೆ. ತಮಿಳುನಾಡು ರೈತರು ಯಾವುದೇ ಸಮಸ್ಯೆಯನ್ನು ಎದುರಿಸಬಾರದು. ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ತನ್ನ ಪಾಲಿನ ಕಾವೇರಿ ನೀರನ್ನು ಪಡೆಯಬೇಕು ಎಂದು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top