fbpx
ಸಮಾಚಾರ

133 ವರ್ಷ ಹಳೆಯ ಸರ್ಕಾರಿ ಶಾಲೆ ದತ್ತು ಪಡೆದ ಕಿಚ್ಚ ಸುದೀಪ್

ಕಿಚ್ಚ ಸುದೀಪ್​ ಅವರು ಅಭಿನಯದ ಜೊತೆಗೆ ಸಾಕಷ್ಟು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನ ತಾವು ತೊಡಗಿಸಿಕೊಂಡಿದ್ದಾರೆ. ಸುದೀಪ್​ ಚಾರಿಟೇಬಲ್​ ಟ್ರಸ್ಟ್​ ವತಿಯಿಂದ ಸಾಕಷ್ಟು ಜನರ ಕಷ್ಟಕ್ಕೆ ನೆರವಾಗಿದ್ದಾರೆ.ಸರ್ಕಾರಿ ಶಾಲೆಗಳನ್ನು ಉಳಿಸೋ ಕಾಳಜಿಯನ್ನು ತೋರಿಸಿದ್ದಾರೆ ನಟ. 10ಕ್ಕೂ ಹೆಚ್ಚು ಶಾಲೆಗಳನ್ನು ನಟ ದತ್ತು ಸ್ವೀಕರಿಸಿದ್ದಾರೆ. ಮತ್ತೆ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದಾರೆ.

ನಟ ಕಿಚ್ಚ ಸುದೀಪ್ ಸಹಾಯ ಮಾಡೋದರಲ್ಲಿ ಎತ್ತಿದ ಕೈ. ಅವರ ಚಾರಿಟೇಬಲ್ ಟ್ರಸ್ಟ್​​ ವತಿಯಿಂದ ಬಡ ಜನರಿಗೆ, ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದ ಅನೇಕ ಉದಾಹರಣೆ ಕಣ್ಣ ಮುಂದಿವೆ. ಇದೀಗ ಅಭಿನಯ ಚಕ್ರವರ್ತಿ ಶಿವಮೊಗ್ಗ ಜಿಲ್ಲೆಯಲ್ಲಿರುವ ಸುಮಾರು 133 ವರ್ಷ ಹಳೆಯ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದಾರೆ.

ಶಿವಮೊಗ್ಗ ನಗರದ ಬಿ.ಹೆಚ್. ರಸ್ತೆಯಲ್ಲಿರುವ ಸರ್ಕಾರಿ ಕನ್ನಡ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆಯನ್ನು ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ದತ್ತು ಪಡೆದುಕೊಂಡಿದೆ. ಈ ಶಾಲೆ ಅಂದಾಜು 133 ವರ್ಷಗಳಷ್ಟು ಹಳೆಯದು ಎನ್ನಲಾಗಿದೆ. ಶಾಲೆಗಾಗಿ ನಾವು ನೀವು ಯೋಜನೆ ಅಡಿಯಲ್ಲಿ ಇದನ್ನು ದತ್ತು ಪಡೆಯಲಾಗಿದೆ. ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗುವಂತಹ ಕೆಲಸಗಳನ್ನು ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಮಾಡಲಿದೆ.

ಈ ಹಿಂದೆ ಕೂಡ ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೆಲವು ಶಾಲೆಗಳನ್ನು ದತ್ತು ಪಡೆಯಲಾಗಿತ್ತು. ಹಲವು ಸರ್ಕಾರಿ ಶಾಲೆಗಳು ಅಳಿವಿನ ಅಂಚಿನಲ್ಲಿವೆ. ಮಕ್ಕಳ ಸಂಖ್ಯೆ ಕೊರತೆಯ ಕಾರಣ ನೀಡಿ ಕೆಲವೆಡೆ ಶಾಲೆಗಳನ್ನು ಮುಚ್ಚಲಾಗಿದೆ. ಇದರಿಂದ ಬಡಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗಲಿದೆ. ಹಾಗಾಗಿ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದು ಅನೇಕ ಸೆಲೆಬ್ರಿಟಿಗಳು ಪ್ರಯತ್ನಿಸುತ್ತಿದ್ದಾರೆ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top