fbpx
ಸಮಾಚಾರ

ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ 3ನೇ ಪದಕ ಗೆದ್ದ ಲವ್ಲಿನಾ ಬೊರ್ಗೊಹೈನ್‌!

ಟೊಕಿಯೊ ಒಲಂಪಿಕ್ಸ್ ನಲ್ಲಿ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರು ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದು ಭಾರತಕ್ಕೆ ಲಭಿಸುತ್ತಿರುವ ಮೂರನೇ ಪದಕವಾಗಿದೆ. ಇಂದು ನಡೆದ ಸೆಮಿ ಫೈನಲ್​ ಪಂದ್ಯದಲ್ಲಿ ಟರ್ಕಿಯಾದ ಬುಸೆನಾಜ್ ಸುರ್ಮೆನೆಲಿ ವಿರುದ್ಧ 5-0 ಅಂತರದಲ್ಲಿ ಸೋಲು ಕಾಣುವ ಮೂಲಕ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಇದಕ್ಕೂ ಮುನ್ನ ಜುಲೈ 30 ರಂದು ನಡೆದಿದ್ದ ಅಂತಿಮ ಎಂಟರ ಘಟ್ಟದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿದ್ದ ಲವ್ಲಿನಾ ಬೊರ್ಗೊಹೈನ್‌, 4-1 ಅಂತರದಲ್ಲಿ ಎದುರಾಳಿ ಚಿನ್‌-ಚೆನ್‌ ವಿರುದ್ಧ ಗೆದ್ದು ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಚೊಚ್ಚಲ ಪದಕವನ್ನು ಖಚಿತಪಡಿಸಿಕೊಂಡಿದ್ದರು.

ಆದರೆ, ಇಂದು(ಬುಧವಾರ) ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಭಾರತೀಯ ಬಾಕ್ಸರ್‌ ನೀರಿಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲರಾದರು. ಟರ್ಕಿಯ ಬುಸೆನಝ್‌ ಸುರ್ಮೆನೆಲಿ ವಿರುದ್ಧ ಖಾತೆ ತೆರೆಯದೆ ಹೀನಾಯ ಸೋಲು ಅನುಭವಿಸಿದರು. ಆ ಮೂಲಕ ಮಹತ್ವದ ಕ್ರೀಡಾಕೂಟದಲ್ಲಿ ಚೊಚ್ಚಲ ಕಂಚಿನ ಪದಕಕ್ಕೆ ಲವ್ಲಿನಾ ಸಮಾಧಾನ ಪಟ್ಟುಕೊಂಡರು.

ಸದ್ಯ ಈ ಭಾರಿಯ ಒಲಿಂಪಿಕ್ಸ್​ನಲ್ಲಿ ಭಾರತದ ಕಡೆಯಿಂದ ನಿರೀಕ್ಷೆಗೆ ತಕ್ಕ ಪ್ರದರ್ಶನ ಬಂದಿಲ್ಲ. ಈವರೆಗೆ ಮೂರು ಪದಕಗಳನ್ನಷ್ಟೆ ಭಾರತ ಬಾಜಿಕೊಂಡಿದೆ. ಮಹಿಳಾ ವೇಟ್ ಲಿಫ್ಟಿಂಗ್‌ನಲ್ಲಿ ಮೀರಾಬಾಯಿ ಚಾನು (49 ಕೆಜಿ ವಿಭಾಗ) ಭಾರತಕ್ಕೆ ಬೆಳ್ಳಿ ಮೆರಗು ತಂದಿದ್ದಾರೆ. ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್‌ನಲ್ಲಿ ಪಿವಿ ಸಿಂಧು ಕಂಚು ಗೆದ್ದಿದ್ದಾರೆ. ಇಂದು ಮಹಿಳಾ ಬಾಕ್ಸಿಂಗ್​ನ 69 ಕೆಜಿ ವಿಭಾಗದ ಸೆಮಿಫೈನಲ್​ನಲ್ಲಿ ಲವ್ಲಿನಾ ಸೋಲು ಅನುಭವಿಸಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top