fbpx
ಸಮಾಚಾರ

3ನೇ ಬಾರಿಯೂ ಕೈತಪ್ಪಿದ ಸಚಿವ ಸ್ಥಾನ – ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದ ಕುಮಾರಸ್ವಾಮಿ

ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರಗೊಂಡು ಬಿಜೆಪಿ ಸರ್ಕಾರದ ಮೊದಲ ಎರಡು ಪ್ರಮಾಣ ವಚನ ಕಾರ್ಯಕ್ರಮಕ್ಕೂ ಗೈರಾಗಿದ್ದ ಜಿಲ್ಲೆಯ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಮೂರನೇ ಬಾರಿಯೂ ಸಚಿವ ಸ್ಥಾನ ಕೈತಪ್ಪಿ ಭಾರೀ ನಿರಾಸೆ ಮೂಡಿದೆ. ನಿನ್ನೆ ಸಂಜೆವರೆಗೂ ನೂತನ ಸಚಿವರ ಹೆಸರಲ್ಲಿ ಎಂ.ಪಿ.ಕುಮಾರಸ್ವಾಮಿ ಹೆಸರಿತ್ತು. ಆದರೆ ಕೊನೆ ಘಳಿಗೆಯಲ್ಲಿ ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ.

ಸ್ವತಃ ಶಾಸಕರು ಈ ಕುರಿತು ಫೇಸ್‌ಬುಕ್ ಪೋಸ್ಟ್ ಹಾಕಿದ್ದಾರೆ. ‘ಮುಂದಿನ ಕೆಲ ದಿನಗಳಲ್ಲಿ ಸಂಪುಟ ವಿಸ್ತರಣೆ ನಡೆಯುವ ಸಂದರ್ಭದಲ್ಲಿ ನನ್ನನ್ನು ಪರಿಗಣಿಸುವುದಾಗಿಯೂ ಭರವಸೆ ನೀಡಿದ್ದಾರೆ” ಎಂದು ಅವರು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಫೇಸ್ಬುಕ್ ಪೋಸ್ಟ್ ಈ ರೀತಿ ಇದೆ:
ಆತ್ಮೀಯ ನನ್ನ ವಿಧಾನಸಭಾ ಕ್ಷೇತ್ರದ ಬಂಧುಗಳೇ, ಈಗ ತಾನೇ ವಿಧಾನಸೌಧದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ನನ್ನನ್ನು ಕರೆಸಿ ಇಂದಿನ ಸಂಪುಟದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಯಾವುದೇ ಸಚಿವ ಸ್ಥಾನ ನೀಡಲಾಗುತ್ತಿಲ್ಲ ಹಾಗೂ ಸರ್ಕಾರಕ್ಕೆ ನನ್ನ ಬೆಂಬಲವನ್ನು ಕೋರಿದರು.

ಹಾಗೆ ನನ್ನ ಕ್ಷೇತ್ರಕ್ಕೆ ಹಾಗೂ ಚಿಕ್ಕಮಗಳೂರು ಜಿಲ್ಲೆ ಅಭಿವೃದ್ಧಿಗೆ ಪ್ರಾಶಸ್ತ್ಯ ನೀಡುವುದಾಗಿಯೂ, ಮುಂದಿನ ಕೆಲ ದಿನಗಳಲ್ಲಿ ಸಂಪುಟ ವಿಸ್ತರಣೆ ನಡೆಯುವ ಸಂದರ್ಭದಲ್ಲಿ ನನ್ನನ್ನು ಪರಿಗಣಿಸುವುದಾಗಿಯೂ ಭರವಸೆ ನೀಡಿದ್ದಾರೆ. ಭರವಸೆ ನೀಡಿದ ಮಾನ್ಯ ಮುಖ್ಯಮಂತ್ರಿಗಳಿಗೆ, ನನಗಾಗಿ ಪ್ರಾರ್ಥನೆ ಸಲ್ಲಿಸಿ ನಿರೀಕ್ಷೆ ಇಟ್ಟುಕೊಂಡಿದ್ದ ಕ್ಷೇತ್ರದ ಜನತೆಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಈ ಸರ್ಕಾರ ಅತ್ಯಂತ ಸುಭದ್ರವಾಗಿ ಕೆಲಸ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ, ಹಾಗೂ ಕ್ಷೇತ್ರದ ಅಭಿವೃದ್ಧಿ ಮಾಡುತ್ತಾ ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸೋಣಾ, ನನ್ನ ಮೇಲಿನ ನಿಮ್ಮ ಪ್ರೀತಿಗೆ ನಿಮ್ಮೆಲ್ಲರಿಗೂ ಮತ್ತೊಮ್ಮೆ ಆಭಾರಿಯಾಗಿದ್ದೇನೆ.

ಇಂತಿ ಎಂಪಿ ಕುಮಾರಸ್ವಾಮಿ
ಶಾಸಕರು
ಮೂಡಿಗೆರೆ ವಿಧಾನಸಭಾ ಕ್ಷೇತ್ರ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top