fbpx
ಸಮಾಚಾರ

ಸಹಕರಿಸಿದವರೆಲ್ಲರಿಗೂ ಧನ್ಯವಾದ ಹೇಳಿದ ಸುರೇಶ್ ಕುಮಾರ್

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವ ಸರ್ಕಾರದ ನೂತನ ಸಚಿವರ ಪಟ್ಟಿ ರಿಲೀಸ್ ಆಗಿದೆ. ಹಿಂದಿನ ಬಿಎಸ್ ಯುಡಿಯೂರಪ್ಪ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಿಂದ ಕೈ ಬಿಡಲಾಗಿದೆ.

ಈ ಬೆನ್ನಲ್ಲೇ ಮಾಜಿ ಸಚಿವ ಸುರೇಶ್ ಕುಮಾರ್ ಭಾವುಕರಾಗಿ ಜನರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಫೇಸ್‍ಬುಕ್ ನಲ್ಲಿ ಬರೆದುಕೊಂಡಿರುವ ಮಾಜಿ ಸಚಿವರು, ‘ಕಳೆದ 2 ವರ್ಷಗಳ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ.

ಇನ್ನು 29 ಶಾಸಕರು ಸಂಪುಟ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಇದರಲ್ಲಿ 8 ಲಿಂಗಾಯತ, 7 ಒಬಿಸಿ, 7 ಒಕ್ಕಲಿಗ, 3 ದಲಿತ, ಎಸ್ಟಿ ಮತ್ತು ರೆಡ್ಡಿ ತಲಾ 1, ಇಬ್ಬರು ಬ್ರಾಹ್ಮಣ ಹಾಗೂ ಒಬ್ಬ ಮಹಿಳೆಗೆ ಅವಕಾಶ ನೀಡಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top