fbpx
ಸಮಾಚಾರ

ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರನ್ನು ಬದಲಿಸಿದ ಪ್ರಧಾನಿ ಮೋದಿ: ಹೊಸ ಹೆಸರೇನು ಗ್ಗೊತ್ತಾ?

ದೇಶದ ಅತ್ಯುನ್ನತ ಕ್ರೀಡಾ ಪುರಸ್ಕಾರವಾದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರು ಬದಲಾವಣೆ ಮಾಡಲಾಗಿದೆ. ಭಾರತೀಯ ಅಥ್ಲೀಟ್‌ಗಳ ಕ್ರೀಡಾ ಸಾಧನೆಗಾಗಿ ನೀಡಲಾಗುತ್ತಿದ್ದ ಅತ್ಯುನ್ನತ್ತ ರಾಷ್ಟ್ರೀಯ ಪುರಸ್ಕಾರಗಳಲ್ಲಿ ಒಂದಾಗಿದ್ದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರು ಬದಲಿಸಲಾಗಿದೆ. ಇನ್ಮುಂದೆ ಈ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುತ್ತದೆ.

ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಖೇಲ್ ರತ್ನ ಪ್ರಶಸ್ತಿಗೆ ಮೇಜರ್ ಧ್ಯಾನ್ ಚಂದ್ ಅವರ ಹೆಸರಿಡಲು ಭಾರತದಾದ್ಯಂತ ನಾಗರಿಕರಿಂದ ಅನೇಕ ಮನವಿಗಳು ಬಂದಿತ್ತು. ಅವರ ಅಭಿಪ್ರಾಯಗಳಿಗಾಗಿ ಧನ್ಯವಾದಗಳು. ಅವರ ಭಾವನೆಯನ್ನು ಗೌರವಿಸಿ, ಈ ಮೂಲಕ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಹಾಕಿ ದಿಗ್ಗಜ ಮೇಜರ್ ಧ್ಯಾನ್‌ ಚಂದ್ ಪುತ್ಥಳಿಗೆ ಪುಷ್ಪನಮನ ಸಲ್ಲಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು 1991-1992ರಿಂದ ನೀಡಲಾಗುತ್ತಿದೆ. ಚೆಸ್ ದಿಗ್ಗಜ ವಿಶ್ವನಾಥನ್ ಆನಂದ್‌ ಖೇಲ್ ರತ್ನ ಪ್ರಶಸ್ತಿ ಪಡೆದ ಮೊದಲ ಕ್ರೀಡಾಪಟು ಎನಿಸಿದ್ದಾರೆ. ವಿಶ್ವನಾಥ್ ಮಾತ್ರವಕ್ಕದೇ ಲಿಯಾಂಡರ್ ಪೇಸ್‌, ಸಚಿನ್ ತೆಂಡುಲ್ಕರ್, ಧನರಾಜ್ ಪಿಳ್ಳೈ, ಪುಲ್ಲೇಲಾ ಗೋಪಿಚಂದ್, ಅಭಿನವ್ ಬಿಂದ್ರಾ, ಅಂಜು ಬಾಬಿ ಬಾಬಿ ಜಾರ್ಜ್‌, ಮೇರಿ ಕೋಮ್ ಹಾಗೂ ಕಳೆದ ವರ್ಷ ಅಂದರೆ 2020ರಲ್ಲಿ ರೋಹಿತ್ ಶರ್ಮಾ, ರಾಣಿ ರಾಂಪಾಲ್ ಸೇರಿ ಐವರು ಕ್ರೀಡಾಪಟುಗಳು ಖೇಲ್‌ ರತ್ನ ಪ್ರಶಸ್ತಿಗೆ ಭಾಜನರಾಗಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top