fbpx
ಸಮಾಚಾರ

ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾದ ನಟ ರಾಘವೇಂದ್ರ ರಾಜ್​ಕುಮಾರ್; ಕಾರಣವೇನು?

ನಟ, ನಿರ್ಮಾಪಕ ರಾಘವೇಂದ್ರ ರಾಜ್​ಕುಮಾರ್ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಸಿಎಂ ಅವರ ನಿವಾಸಕ್ಕೆ ತೆರಳಿ ಮುಖ್ಯಮಂತ್ರಿಯವರೊಂದಿಗೆ ಮಾತುಕತೆ ನಡೆಸಿದ್ದಾರೆ.

ಭೇಟಿ ಬಳಿಕ ಮಾತನಾಡಿದ ಅವರು, ಸಿಎಂ ಬೊಮ್ಮಾಯಿಯವರು ನಮ್ಮ ಕುಟುಂಬದ ಸ್ನೇಹಿತರು, ಅವರು ಸಿಎಂ ಆಗಿರುವ ಹಿನ್ನೆಲೆಯಲ್ಲಿ ಅಭಿನಂದನೆ ಹೇಳಲು ಬಂದಿದ್ದೆ.ನಮ್ಮ ಶಿಕ್ಷಣ ಟ್ರಸ್ಟ್ ನಿಂದ ಒಂದು ಕಾರ್ಯಕ್ರಮ ಆಯೋಜಿಸಲಾಗಿದೆ, ಆ ಕಾರ್ಯಕ್ರಮಕ್ಕೆ ಸಿಎಂ ಅವರನ್ನು ಆಹ್ವಾನಿಸಿದ್ದೇವೆ.” ಎಂದು ರಾಘಣ್ಣ ಹೇಳಿದರು.

ಇನ್ನೂ ಇದೆ ವೇಳೆ ಸಿನಿಮಾ‌ ಮಂದಿರಗಳಿಗೆ ಶೇ.100 ಸೀಟು ಸಾಮರ್ಥ್ಯದೊಂದಿಗೆ ಅವಕಾಶ ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ರಾಘವೇಂದ್ರ ರಾಜ್ ಕುಮಾರ್, ಚಿತ್ರಮಂದಿರಗಳ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಸರ್ಕಾರದ ಜೊತೆ ಚರ್ಚಿಸಲಿದೆ ಎಂದು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top