fbpx
ಸಮಾಚಾರ

ಮಾಜಿ ಸಿಎಂ ಬಿಎಸ್‌ವೈಗೆ ಸಂಪುಟ ದರ್ಜೆ ಸ್ಥಾನಮಾನ ಕೊಟ್ಟ ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ, ತಮಗೆ ಅಧಿಕಾರ ದೊರೆಯಲು ಮುಖ್ಯ ಕಾರಣಕರ್ತರಾದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ದೊರಕಿಸಿ ಕೊಟ್ಟಿದ್ದಾರೆ.

ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ರಾಜ್ಯ ಶಿಷ್ಟಾಚಾರ) ರಾಜೇಶ ಶಂಕ್ರಪ್ಪ ಸೂಳಿಕೇರಿಯವರು ರಾಜ್ಯಪಾಲರ ಆದೇಶಾನುಸಾರ ಹೊರಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೆ ಸಂಪುಟ ದರ್ಜೆಯ ಸಚಿವರು ಪಡೆಯುವ ಎಲ್ಲಾ ಸೌಲಭ್ಯಗಳನ್ನು ನೀಡಲಾಗುತ್ತದೆ. ಇದು ಬಸವರಾಜ ಬೊಮ್ಮಾಯಿ‌ ಸಿಎಂ ಅಗಿ ಇರುವವರೆಗೆ ಸಂಪುಟ ದರ್ಜೆಯ ಸಚಿವರ ಎಲ್ಲಾ ಸೌಲಭ್ಯ ನೀಡಲಾಗುವುದು.

ಸಂಪುಟ ದರ್ಜೆಯ ಸಚಿವರಿಗೆ ಸಿಗುವ ಎಲ್ಲಾ ಸೌಲಭ್ಯಗಳಾದ ಸರ್ಕಾರಿ ನಿವಾಸ, ಎಸ್ಕಾರ್ಟ್, ಪೈಲಟ್ ವಾಹನಗಳು, ಗನ್ ಮ್ಯಾನ್ ಸೌಲಭ್ಯ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಸಿಗಲಿವೆ. ಇದಲ್ಲದೆ ತಿಂಗಳಿಗೆ ಮೂರು ಲಕ್ಷ ರೂ ಭತ್ಯೆ ಜೊತೆಗೆ ಒಂದು ಲಕ್ಷ ರೂಪಾಯಿ ಬಾಡಿಗೆ ಹಾಗೂ ಸಾರಿಗೆಭತ್ಯೆ ಪಡೆಯಲು ಯಡಿಯೂರಪ್ಪನವರು ಅರ್ಹರಾಗಿರುತ್ತಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top