fbpx
ಸಮಾಚಾರ

ಚಿತ್ರೀಕರಣ ವೇಳೆ ನಟ ಪ್ರಕಾಶ್ ರೈಗೆ ಗಂಭೀರ ಗಾಯ: ದಿಢೀರ್ ಶಸ್ತ್ರ ಚಿಕಿತ್ಸೆ

ಚಿತ್ರವೊಂದರ ಚಿತ್ರೀಕರಣ ವೇಳೆ ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರೈ ಅವರ ಕೈಗೆ ಗಂಭೀರ ಗಾಯವಾಗಿದ್ದು ಶಸ್ತ್ರ ಚಿಕಿತ್ಸೆಗಾಗಿ ಅವರನ್ನು ಹೈದರಾಬಾದ್ ಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ತಮಿಳಿನ ಖ್ಯಾತ ನಟ ಧುನುಷ್ ಅವರ ಬಹು ನಿರೀಕ್ಷಿತ ಚಿತ್ರ ‘ತಿರುಚಿತ್ರಾಂಬಲಂ’ ಚಿತ್ರದ ಫೈಟಿಂಗ್ ದೃಶ್ಯದ ಚಿತ್ರೀಕರಣವ ವೇಳೆ ಪ್ರಕಾಶ್ ರೈ ಅವರ ಕೈಗೆ ಗಂಭೀರ ಗಾಯವಾಗಿದೆ. ಹೀಗಾಗಿ ಅವರ ವೈದ್ಯ ಸ್ನೇಹಿತ ಡಾ.ಗುರುವಾ ರೆಡ್ಡಿ ಅವರ ಸಲಹೆಯ ಮೇರೆಗೆ ಶಸ್ತ್ರ ಚಿಕಿತ್ಸೆಗಾಗಿ ಹೈದರಾಬಾದ್ ಗೆ ತೆರಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಬಗ್ಗೆ ಸ್ವತಃ ಪ್ರಕಾಶ್​ ರೈ ಮಾಹಿತಿ ಹಂಚಿಕೊಂಡಿದ್ದಾರೆ. ‘ಒಂದು ಸಣ್ಣ ಪೆಟ್ಟಾಗಿದೆ. ಶಸ್ತ್ರ ಚಿಕಿತ್ಸೆಗಾಗಿ ನನ್ನ ಸ್ನೇಹಿತ, ಡಾ. ಗುರುವರೆಡ್ಡಿ ಬಳಿ ತೆರಳುತ್ತಿದ್ದೇನೆ. ನಾನು ಬೇಗ ಗುಣಮುಖನಾಗುತ್ತೇನೆ. ಚಿಂತೆ ಮಾಡಬೇಕಾದ ಅಗತ್ಯ ಇಲ್ಲ. ನನಗಾಗಿ ಪ್ರಾರ್ಥಿಸಿ’ ಎಂದು ಅವರು ಟ್ವೀಟ್​ ಮಾಡಿದ್ದಾರೆ. ಗಾಯಗೊಂಡಿರುವ ಪ್ರಕಾಶ್ ರಾಜ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಚಿತ್ರರಂಗದ ಸ್ನೇಹಿತರು ಹಾಗೂ ಅಭಿಮಾನಿಗಳು ಹಾರೈಸುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top