fbpx
ಸಮಾಚಾರ

ಶೂಟಿಂಗ್ ವೇಳೆ ಫೈಟರ್ ವಿವೇಕ್ ದುರಂತ ಸಾವು – ರಚಿತಾ ರಾಮ್ ಸಂತಾಪ

ಮಾಸ್ತಿ ಗುಡಿ ನಂತರ ಇದೀಗ ಮತ್ತೊಂದು ಕನ್ನಡ ಚಿತ್ರರಂಗದಲ್ಲಿ ಶೂಟಿಂಗ್ ವೇಳೆ ಫೈಟರ್ ಓರ್ವ ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆಯಲ್ಲೇ ನಡೆದಿದೆ. “ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ವಿದ್ಯುತ್ ತಂತಿ ತಗುಲಿ 28 ವರ್ಷದ ಫೈಟರ್ ವಿವೇಕ್ ಮೃತಪಟ್ಟಿದ್ದಾರೆ.

ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ರಾಮನಗರ ತಾಲೂಕಿನ ಜೋಗನದೊಡ್ಡಿಯಲ್ಲಿ ನಡೆಯುತಿತ್ತು. ಈ ಸಂದರ್ಭದಲ್ಲಿ ಈ ವೇಳೆ ರೋಪ್​ ಎಳೆಯುವಾಗ ಫೈಟರ್​ ವಿವೇಕ್ ಅವರಿಗೆ ವಿದ್ಯುತ್ ತಂತಿ ತಗುಲಿದೆ. ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ .ಇದೀಗ ಈ ಬಗ್ಗೆ ನಟಿ ರಚಿತಾ ರಾಮ್ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

 

 

ಈ ಘಟನೆ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಹಾಕಿರುವ ಅವರು, ‘ವಿದ್ಯುತ್ ಅವಘಡದಿಂದ ಸಾವನ್ನಪ್ಪಿದ ಫೈಟರ್ ವಿವೇಕ್ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ’ ಎಂದು ಬರೆದುಕೊಂಡಿದ್ದಾರೆ. ಘಟನೆ ನಡೆದಾಗ ರಚಿತಾ ರಾಮ್ ಸ್ಥಳದಲ್ಲಿ ಇರಲಿಲ್ಲ ಎಂಬ ಮಾಹಿತಿ ಸಿಕ್ಕಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top