fbpx
ಸಮಾಚಾರ

ಟೀಮ್ ಇಂಡಿಯಾ ಕೋಚ್ ಹುದ್ದೆಗೆ ರವಿಶಾಸ್ತ್ರಿ ಗುಡ್‌ಬೈ? ದ್ರಾವಿಡ್‌ರತ್ತ ಎಲ್ಲರ ಚಿತ್ತ

ನ್ಯಾಷನಲ್‌ ಕ್ರಿಕೆಟ್‌ ಅಕಾಡೆಮಿ(ಎನ್‌ಸಿಎ) ಮುಖ್ಯಸ್ಥ ಸ್ಥಾನಕ್ಕೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಮಂಗಳವಾರ ಅರ್ಜಿ ಆಹ್ವಾನಿಸಿದೆ. ಇದರ ಬೆನ್ನಲ್ಲೆ ಭಾರತ ಕ್ರಿಕೆಟ್‌ ಹಿರಿಯರ ತಂಡದಲ್ಲಿ ರಾಹುಲ್‌ ದ್ರಾವಿಡ್ ಪ್ರಮುಖ ಹುದ್ದೆ ಅಲಂಕರಿಸಲಿದ್ದಾರೆಂಬ ವದಂತಿಗಳು ಶುರುವಾಗಿವೆ.

ಹೌದು.. ಯುಎಇನಲ್ಲಿ ನಡೆಯಲಿರುವ ಟ್ವೆಂಟಿ-20 ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಮುಖ್ಯ ತರಬೇತುದಾರನ ಸ್ಥಾನವನ್ನು ರವಿಶಾಸ್ತ್ರಿ ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಕುರಿತಂತೆ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ವರದಿಯಲ್ಲಿರುವಂತೆ ಖಚಿತ ಮಾಹಿತಿಗಳ ಪ್ರಕಾರ ಮುಂಬರುವ ಟಿ20 ವಿಶ್ವಕಪ್ ಬಳಿಕ ಕೋಚಿಂಗ್ ಪ್ಯಾನೆಲ್ ನಲ್ಲಿ ಮುಂದುವರಿಯಲು ರವಿಶಾಸ್ತ್ರಿ ಹಾಗೂ ಇತರೆ ಸಹಾಯಕ ತರಬೇತುದಾರರು ಆಸಕ್ತಿ ತೋರಿಲ್ಲ . ಹೀಗಾಗಿ ನೂತನ ಕೋಚ್ ಗೆ ಬಿಸಿಸಿಐ ಅರ್ಜಿ ಆಹ್ವಾನಿಸುವ ಸಾಧ್ಯತೆ ಇದ್ದು, ಹಾಲಿ ಎನ್ ಸಿಎ ಮುಖ್ಯಸ್ಥರಾಗಿರುವ ರಾಹುಲ್ ದ್ರಾವಿಡ್ ಕೋಚ್ ಜವಾಬ್ದಾರಿ ಹುದ್ದೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಒಂದು ವೇಳೆ ರವಿಶಾಸ್ತ್ರಿ ನಿರ್ಗಮಿಸಲು ಬಯಸಿದರೆ ನೂತನ ಕೋಚ್ ಆಯ್ಕೆಯಲ್ಲಿ ರಾಹುಲ್ ದ್ರಾವಿಡ್ ಮುಂಚೂಣಿಯಲ್ಲಿ ಗುರುತಿಸಿದ್ದಾರೆ. ಆದರೆ ಇತ್ತೀಚಿನ ಶ್ರೀಲಂಕಾ ಪ್ರವಾಸದ ವೇಳೆ ಪೂರ್ಣಾವಧಿಗೆ ಕೋಚ್ ಆಗುವ ಬಗ್ಗೆ ಯೋಚಿಸಿಲ್ಲ ಎಂದು ದ್ರಾವಿಡ್ ಹೇಳಿಕೆ ನೀಡಿದ್ದರು. ಒಟ್ಟಿನಲ್ಲಿ ಮುಂಬರುವ ಬೆಳವಣಿಗೆಗಳು ಹೆಚ್ಚಿನ ಕುತೂಹಲ ಕೆರಳಿಸಿವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top