fbpx
ಸಮಾಚಾರ

ಬೆಂಗಳೂರು BEL ನೇಮಕಾತಿ: 511 ಹುದ್ದೆಗಳಿಗೆ ಅರ್ಜಿ ಅಹ್ವಾನ

ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) 2021ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಕೃತ ವೆಬ್‌ಸೈಟಿನಲ್ಲಿ ಪ್ರಕಟಣೆ ಹೊರಡಿಸಿದೆ. 511ಕ್ಕೂ ಅಧಿಕ ಪ್ರಾಜೆಕ್ಟ್ ಇಂಜಿನಿಯರ್, ಇಂಜಿನಿಯರ್‌ಗಳನ್ನು ನೇಮಿಸಲಾಗುತ್ತಿದೆ. ಈ ಹುದ್ದೆಗೆ ಆಸಕ್ತ ಅರ್ಹ ಅಭ್ಯರ್ಥಿಗಳು ಆಗಸ್ಟ್ 15, 2021ರೊಳಗೆ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ :
ಟ್ರೈನಿ ಇಂಜಿನಿಯರ್ -I – 203 ಹುದ್ದೆಗಳು
ಪ್ರಾಜೆಕ್ಟ್ ಇಂಜಿನಿಯರ್ – I – 308 ಹುದ್ದೆಗಳು
ಒಟ್ಟು 511 ಹುದ್ದೆಗಳು

ವಿದ್ಯಾರ್ಹತೆ:
ಬಿ.ಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

ವಯೋಮಿತಿ :
-ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳಿಗೆ 25 ವರ್ಷ ಮತ್ತು ಟ್ರೈನಿ ಇಂಜಿನಿಯರ್-I ಹುದ್ದೆಗಳಿಗೆ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

-ಪ.ಜಾ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅಪ್ಲಿಕೇಶನ್‌ ಶುಲ್ಕ ವಿವರ
ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ರೂ.200 ಅಪ್ಲಿಕೇಶನ್‌ ಶುಲ್ಕ ಪಾವತಿಸಬೇಕು. ಎಸ್‌ಸಿ / ಎಸ್‌ಟಿ/ PWD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಶುಲ್ಕವನ್ನು ಎಸ್‌ಬಿಐ ಕಲೆಕ್ಟ್‌ ಲಿಂಕ್‌ ಮೂಲಕ ಆನ್‌ಲೈನ್‌ ಮೂಲಕವೇ ಪಾವತಿಸಬೇಕು.

ವೇತನ:
ಮೇಲಿನ ಸದರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.25,000 ದಿಂದ ರೂ.50,000 ವರೆಗೆ ಮಾಸಿಕ ಸಂಭಾವನೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ವೃತ್ತಿಯಲ್ಲಿ ಅನುಭವ ಹೊಂದಿರುವ ಆಧಾರದ ಮೇಲೆ ಮತ್ತು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ : ಅರ್ಹ ಅಭ್ಯರ್ಥಿಗಳು ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನ ಅಧಿಕೃತ ವೆಬ್‌ಸೈಟ್ https://bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಆಗಸ್ಟ್ 15,2021ರೊಳಗೆ ಅರ್ಜಿ ಸಲ್ಲಿಸಬಹುದು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top