fbpx
ಸಮಾಚಾರ

ಸಿಂಹಾದ್ರಿಯ ಸಿಂಹ ಸಿನಿಮಾ ಖ್ಯಾತಿಯ ನಿರ್ಮಾಪಕ ಬಿ. ವಿಜಯ್ ಕುಮಾರ್ ವಿಧಿವಶ

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಿರ್ಮಾಪಕ ಬಿ.ವಿಜಯ್ ಕುಮಾರ್(63) ಹೃದಯಘಾತದಿಂದಾಗಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲ್ತಿದ್ದ ವಿಜಯ್ ಕುಮಾರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾಗಿದ್ದರು. ಸಿಂಹಾದ್ರಿಯ ಸಿಂಹ ಸೇರಿ ಹಲವು ಚಿತ್ರ ನಿರ್ಮಾಣ ಮಾಡಿದ್ರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಿ.ವಿಜಯ್ ಕುಮಾರ್ ಭಾನುವಾರ (ಆಗಸ್ಟ್ 15) ರಾತ್ರಿ 9.30ರ ಸುಮಾರಿಗೆ ಹೃದಯಾಘಾತದಿಂದಾಗಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ದು ರಾತ್ರಿ 9.20ಕ್ಕೆ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತ ಸಂಭವಿಸಿದ ತಕ್ಷಣ ಅವರನ್ನು ಸಾಗರ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಉಸಿರು ಚೆಲ್ಲಿದ್ದರು.

ವಿಜಯ್​​ಕುಮಾರ್ ಅವರು ಸಿಂಹಾದ್ರಿಯ ಸಿಂಹ, ಲಯನ್ ಜಗಪತಿ ರಾವ್, ಮೌನಗೀತೆ, ಜಗದೇಕ ವೀರ, ಸ್ವಚ್ಛ ಭಾರತ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ, ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top