fbpx
ಸಮಾಚಾರ

‘ಹಿಂದೂ ಭಯೋತ್ಪಾದನೆ’ಯಿದೆ ಎಂದಿದ್ದವರಿಗೆ ಚಳಿ ಬಿಡಿಸಿದ ನಟಿ ಪ್ರಣಿತಾ

ಭಾರತದಲ್ಲಿ ಹಿಂದೂ ಟೆರರ್ ಇದೆ ಎಂದವರಿಗೆ ನಟಿ ಪ್ರಣಿತಾ ತಿರುಗೇಟು ನೀಡಿರುವುದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಾಗುತ್ತಿದೆ. ಆರ್‍ಎಸ್‍ಎಸ್ ಸಂಘಟನೆಗೆ ಸೇರಿದವರು ಬೇರೆ ಧರ್ಮದವರ ಮೇಲೆ ಹಿಂಸಾಚಾರ ನಡೆಸುತ್ತಿದ್ದಾರೆ. ಹೀಗಾಗಿ ಭಾರತದಲ್ಲಿ ಹಿಂದೂ ಟೆರರ್ ಇದೆ. ತಾಲಿಬಾನಿಗಳಿಗೂ ಹಿಂದೂ ಟೆರರಿಸಮ್‍ಗೂ ಹೆಚ್ಚು ವ್ಯತ್ಯಾಸವಿಲ್ಲ ಎಂಬಿತ್ಯಾದಿ ವಿಚಾರ ಮುನ್ನೆಲೆಗೆ ಬಂದಿತ್ತು.

 

 

ಈ ಬಗ್ಗೆ ಅನೇಕ ಟ್ವೀಟ್‍ಗಳನ್ನು ಕೂಡ ಮಾಡಲಾಗಿದೆ. ಈ ವಿಚಾರವಾಗಿ ಪ್ರಣಿತಾ ಪ್ರತಿಕ್ರಿಯಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವುದನ್ನು ಮರೆ ಮಾಚಿ ತಮ್ಮನ್ನು ಸಮರ್ಥಿಸಿಕೊಳ್ಳುವುದಕ್ಕಾಗಿ ಕೆಲವರು ಹಿಂದೂ ಟೆರರ್ ಪದ ಬಳಸುತ್ತಿದ್ದಾರೆ. ಪರಿಕಲ್ಪನೆಯನ್ನು ನ್ಯಾಯಸಮ್ಮತಗೊಳಿಸುವ ಪ್ರಯತ್ನಗಳು ಅವರ ಕಲ್ಪನೆಯಾಗಿಯೇ ಉಳಿಯುತ್ತದೆ. ಭಾರತೀಯರೇ ಎಚ್ಚರ, ಶತ್ರುಗಳು ನಮ್ಮ ಗಡಿಯಾಚೆ ಇರುವುದಿಲ್ಲ, ಅವರು ನಿಮ್ಮ ಸುತ್ತಲೂ ಇದ್ದಾರೆ ಎಂದು ಬರೆದುಕೊಂಡಿದ್ದಾರೆ.

 
ಪ್ರಣಿತಾರ ಟ್ವೀಟ್ ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನೀವು ನಿಜಕ್ಕೂ ಹಿಂದೂ. ನಿಮ್ಮ ಬಗ್ಗೆ ನಮಗೆ ನಿಜಕ್ಕೂ ಹೆಮ್ಮೆ ಆಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top