fbpx
ಸಮಾಚಾರ

ಸರ್ಕಾರದ ಜಸ್ಟ್ ಪಾಸ್ ಆಫರ್ ತಿರಸ್ಕರಿಸಿ ಇಡೀ ಜಿಲ್ಲೆಯಲ್ಲೇ ಪಿಯು ಪರೀಕ್ಷೆ ಬರೆದ ಏಕೈಕ ವಿದ್ಯಾರ್ಥಿನಿ

ಕೊರೊನಾ ಹಿನ್ನೆಲೆ ಈ ವರ್ಷ ದ್ವಿತೀಯ ಪಿಯುಸಿಯಲ್ಲಿ ಪರೀಕ್ಷೆ ಬರೆಯದೇ ಎಲ್ಲರನ್ನೂ ಪಾಸ್ ಮಾಡಲಾಗಿದೆ. ಆದರೆ ವಿದ್ಯಾರ್ಥಿನಿಯೊಬ್ಬಳು ನಾನು ಚೆನ್ನಾಗಿ ಓದಿದ್ದೇನೆ. ನಿಮ್ಮ ಜಸ್ಟ್ ಪಾಸ್ ಆಫರ್ ಬೇಡ ಎಂದು ತಿರಸ್ಕರಿಸಿ ಗುರುವಾರ ಗಣಿತ ಪರೀಕ್ಷೆಯನ್ನು ಬರೆದಿದ್ದಾಳೆ. ಈ ಮೂಲಕ ಇಡೀ ಕೊಪ್ಪಳ ಜಿಲ್ಲೆಯಲ್ಲಿ ಪರೀಕ್ಷೆ ಬರೆದ ಏಕೈಕ ಅಭ್ಯರ್ಥಿಯಾಗಿದ್ದಾಳೆ.

ಈ ವರ್ಷದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು, ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗಿದೆ. ಆದರೆ ಕನಿಷ್ಟ ಅಂಕ ಬೇಡ ಎನ್ನುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ.ಅದರಂತೆ ಕನಿಷ್ಠ ಅಂಕದ ಆಫರ್ ತಿರಸ್ಕರಿಸಿರುವ ಕೊಪ್ಪಳದ ವಿದ್ಯಾರ್ಥಿನಿಯೋರ್ವಳು, ಆ.19-ಗುರುವಾರದಂದು ಗಣಿತ ಪರೀಕ್ಷೆ ಬರೆದಿದ್ದಾಳೆ. ಭೂಮಿಕಾ ತಾವರಗೆರೆ ಎಂಬ ಈ ವಿದ್ಯಾರ್ಥಿನಿ ಇಡೀ ಕೊಪ್ಪಳ ಜಿಲ್ಲೆಯಲ್ಲೇ ಪಿಯುಸಿ ಪರೀಕ್ಷೆ ಬರೆದ ಏಕೈಕ ವಿದ್ಯಾರ್ಥಿನಿ ಎಂಬುದು ವಿಶೇಷ.

ಗಂಗಾವತಿಯ ಸೆಂಟ್ ಪೌಲ್ ಶಾಲೆಯಲ್ಲಿ ಉತ್ತಮ ಅಂಕ ಪಡೆದು ಪಾಸಾಗಿದ್ದ ಭೂಮಿಕಾಳು 2020 ರಲ್ಲಿ ನಡೆದ ಪಿಯುಸಿ ಪರೀಕ್ಷೆಗೆ ಹಾಜರಾಗಲು ಆಗಿರಲಿಲ್ಲ, ಅನಾರೋಗ್ಯದ ಕಾರಣಕ್ಕಾಗಿ ಪರೀಕ್ಷೆಯಿಂದ ದೂರ ಉಳಿದಿದ್ದರು, ಇದೇ ಹಿನ್ನಲೆಯಲ್ಲಿ ಆಕೆಯನ್ನು ರಿಪೀಟರ್ಸ್ ಎಂದು ಆಕೆ ಕಡಿಮೆ ಅಂಕ ನೀಡಲಾಗಿದೆ. ನನಗೆ ಶೇ 85 ಕ್ಕಿಂತ ಅಧಿಕ ಅಂಕ ಪಡೆಯುವ ಸಾಮಾರ್ಥ್ಯ ಇದೆ. ಈ ಕಾರಣಕ್ಕಾಗಿ ಸರ್ಕಾರದ ಪಾಸ್​​ ಆಫರ್ ತಿರಸ್ಕರಿಸಿ ಇಂದು ಪರೀಕ್ಷೆ ಬರೆದಿದ್ದಾಳೆ.

ಇಲ್ಲಿ ಆಕೆಗೆ ಕಡಿಮೆ ಅಂಕ ಬರಲು ಕಾರಣ ರಿಪೀಟರ್ ಆಗಿದ್ದರಿಂದ ಪ್ರಾಯೋಗಿಕ ಪರೀಕ್ಷೆಯ ಅಂಕ ನೀಡಿಲ್ಲ, ಈಗ ಮತ್ತೆ ಪರೀಕ್ಷೆ ಬರೆಯುತ್ತಿರುವದರಿಂದ ಪ್ರಾಯೋಗಿಕ ಪರೀಕ್ಷೆಗೂ ಅವಕಾಶ ನೀಡಿ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಇಲಾಖೆಯ ನಿರ್ದೇಶಕರಿಂದ ಮಾರ್ಗದರ್ಶನ ಪಡೆಯಲಾಗುವುದು ಎಂದು ಡಿಡಿಪಿಯು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top