fbpx
ಸಮಾಚಾರ

ಈ ವರ್ಷಕ್ಕಿಲ್ಲ ಕೆಜಿಎಫ್ 2 ದರ್ಶನದ ಭಾಗ್ಯ: ರಿಲೀಸ್ ಡೇಟ್ ಘೋಷಣೆ ಮಾಡಿದ ಚಿತ್ರತಂಡ

ಭಾರತೀಯ ಚಿತ್ರರಂಗ ಕುತೂಹಲದಿಂದ ಕಾಯುತ್ತಿರುವ ‘ಕೆಜಿಎಫ್​​ 2’ ಸಿನಿಮಾ ಯಾವಾಗ ರಿಲೀಸ್‌ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹೌದು ಈ ಬಗ್ಗೆ ಚಿತ್ರತಂಡ ಸಿನಿ ಪ್ರಿಯರಿಗೆ ಗುಡ್‌ನ್ಯೂಸ್‌ ನೀಡಿದ್ದು, 2022ರ ಏಪ್ರಿಲ್​ 14ರಂದು ಚಿತ್ರ ಬಿಡುಗಡೆ ಮಾಡುವುದಾಗಿ ತಿಳಿಸಿದೆ.

 

 

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಇಷ್ಟು ಹೊತ್ತಿಗಾಗಲೇ ‘ಕೆಜಿಎಫ್​ 2’ ತೆರೆಕಂಡಿರಬೇಕಿತ್ತು. ಆದರೆ ಕೊರೊನಾ ವೈರಸ್​ ಎರಡನೇ ಅಲೆ ಹರಡಿದ ಪರಿಣಾಮ ಚಿತ್ರದ ರಿಲೀಸ್​ ದಿನಾಂಕ ಮುಂದೂಡಲಾಗಿತ್ತು. ಹೊಸ ರಿಲೀಸ್​ ಡೇಟ್​ ತಿಳಿದುಕೊಳ್ಳಲು ಸಿನಿಪ್ರಿಯರು ಕಾಯುತ್ತಿದ್ದರು. ಆ ಕಾಯುವಿಕೆಗೆ ಈಗ ಬ್ರೇಕ್​ ಬಿದ್ದಿದೆ. ಆದರೆ ಈ ವರ್ಷವೇ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ನೋಡಬೇಕು ಎಂದುಕೊಂಡವರಿಗೆ ನಿರಾಸೆ ಆಗಿದೆ. ಈ ಬಹುನಿರೀಕ್ಷಿತ ಸಿನಿಮಾವನ್ನು ಕಣ್ತುಂಬಿಕೊಳ್ಳಲು ಮುಂದಿನ ವರ್ಷ ಏ.14ರವರೆಗೂ ಕಾಯುವುದು ಅನಿವಾರ್ಯ ಆಗಿದೆ.

ಅಂದಹಾಗೆ 2018ರ ಡಿಸೆಂಬರ್ 21ರಂದು ಬಿಡುಗಡೆಯಾಗಿದ್ದ ಕೆಜಿಎಫ್ ಚಾಪ್ಟರ್ 1 ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿತ್ತು. ಕನ್ನಡ ಚಿತ್ರವನ್ನು 250 ಕೋಟಿ ಕ್ಲಬ್ ಸೇರಿದ ಮೊದಲ ಚಿತ್ರವಾಗಿದ್ದು ಸಾರ್ವಕಾಲಿಕ ದಾಖಲೆ ಬರೆದಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top