fbpx
ಸಮಾಚಾರ

ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿಕೊಂಡ ನಟ ಕಿಚ್ಚ ಸುದೀಪ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆದರೆ ಕೊರೋನಾದಿಂದಾಗಿ ಈ ಸಲ ಕಿಚ್ಚ ತಮ್ಮ ಅಭಿಮಾನಿಗಳಲ್ಲಿ ಹುಟ್ಟುಹಬ್ಬ ಆಚರಣೆಗೆ ಸಂಬಂಧಿಸಿದಂತೆ ಮನವಿಯೊಂದನ್ನು ಮಾಡಿದ್ದಾರೆ.

 

 

ಪ್ರತಿ ವರ್ಷದಂತೆ ಈ ಬಾರಿಯೂ ಕಿಚ್ಚನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಬೇಕು ಎಂದು ಅಭಿಮಾನಿಗಳಿಗೆ ಕಿಚ್ಚ ಇದೀಗ ಸಂದೇಶವನ್ನು ರವಾನಿಸಿದ್ದಾರೆ. ಕೊರೊನಾ ಕಾರಣದಿಂದ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಈ ವಿಚಾರ ಸದ್ಯ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

ನನ್ನೆಲ್ಲಾ, ಪ್ರೀತಿಯ ಅಭಿಮಾನಿ ಸ್ನೇಹಿತರಲ್ಲಿ ಮನವಿ. ಕೋವಿಡ್ ಸಂಕಷ್ಟದ ಈ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವ ನಿಟ್ಟಿನಲ್ಲಿ ಈ ವರ್ಷವೂ ನಾನು ನನ್ನ ಹುಟ್ಟು ಹಬ್ಬವನ್ನು ನಿಮ್ಮೊಂದಿಗೆ ಆಚರಿಸಿಕೊಳ್ಳಲು ಆಗುತ್ತಿಲ್ಲ. ನೀವು ಇದ್ದಲ್ಲಿಂದಲೇ ನಿಮ್ಮ ಪ್ರೀತಿ ತುಂಬಿದ ಶುಭಾಶಯಗಳನ್ನು ತಿಳಿಸಿ ಎಂದು ಕೋರುತ್ತೇನೆ ಎಂದು ಸೋಶಿಯಲ್ ಮೀಡಿಯಾ ಮೂಲಕ ಮನವಿ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top