fbpx
ಸಮಾಚಾರ

ಕುತೂಹಲಕ್ಕೆ ಕಾರಣವಾದ ಸುದೀಪ್-ಸಿಎಂ ಬೊಮ್ಮಾಯಿ ದಿಢೀರ್ ಭೇಟಿ

ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್ ಅವ್ರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ. ಸುದೀಪ್ ಇದ್ದಕ್ಕಿದ್ದಂತೆ ಸಿಎಂ ಬೊಮ್ಮಾಯಿಯನ್ನು ಭೇಟಿಯಾಗಿದ್ದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದ್ದು ಚರ್ಚೆಗೆ ಗ್ರಾಸವಾಗುತ್ತಿದೆ.

ಅಷ್ಟಕ್ಕೂ ಸುದೀಪ್ ಅವರು ಸಿಎಂ ಭೇಟಿ ಮಾಡಿರುವುದು ಯಾಕೆ ಎಂಬ ಕುತೂಹಲದ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಮೂಡಿದೆ. ಅದಕ್ಕೂ ಉತ್ತರ ಸಿಕ್ಕಿದೆ. ಇದೊಂದು ಸೌಹಾರ್ದಯುತ ಭೇಟಿ ಮಾತ್ರ ಎನ್ನಲಾಗಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸುದೀಪ್ ಭೇಟಿಯಾಗಿದ್ದಾರೆ. ಕೆಲವು ಸಮಯ ಸೌಹಾರ್ದಯುತ ಮಾತುಕತೆಯನ್ನು ಸುದೀಪ್ ನಡೆಸಿದ್ದಾರೆ ಎಂದು ವರದಿಯಾಗಿದೆ.

ಅಂದಹಾಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸುದೀಪ್ ಅವರ ಕುಟುಂಬಕ್ಕೆ ಹಲವು ವರ್ಷಗಳ ನಂಟು ಇದೆ. ಬೊಮ್ಮಾಯಿ ಅವರು ಸಿಎಂ ಆಗಿ ಅಧಿಕಾರ ಪಡೆದಾಗ, ಸುದೀಪ್ ಟ್ವೀಟ್ ಮಾಡಿ, ಅಭಿನಂದಿಸಿದ್ದರು. ‘ಅವರ ಸರಳತೆಯನ್ನು ನೋಡಿ ಬೆಳೆದವನು ನಾನು. ನನ್ನ ವೃತ್ತಿಜೀವನದ ಆರಂಭದಲ್ಲಿ ವೈಯಕ್ತಿಕವಾಗಿ ನನಗೆ ಅವರು ಬಹಳ ಬೆಂಬಲ ನೀಡಿದ್ದರು. ನಿಮಗೆ ಒಳ್ಳೆಯದಾಗಲಿ ಮಾಮಾ’ ಎಂದು ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top