fbpx
ಸಮಾಚಾರ

RCB ಸ್ಟಾರ್ ಆಟಗಾರ ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ವಿದಾಯ: ಅಭಿಮಾನಿಗಳಿಗೆ ಶಾಕ್

ಸುಮಾರು ಒಂದೂವರೆ ದಶಕಕ್ಕೂ ಅಧಿಕ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಪ್ರಾಬಲ್ಯ ಸಾಧಿಸಿದ್ದ ದಕ್ಷಿಣ ಆಫ್ರಿಕಾದ ದಿಗ್ಗಜ ವೇಗಿ ಡೇಲ್ ಸ್ಟೇನ್ ಅವರು ಮಂಗಳವಾರ ಎಲ್ಲಾ ಸ್ವರೂಪದ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಟ್ವಿಟರ್ ನಲ್ಲಿ ಈ ವಿಚಾರವನ್ನು ತಿಳಿಸಿದ್ದು ತಮ್ಮ ವೃತ್ತಿಜೀವನದಲ್ಲಿ ಸಹಕರಿಸಿದ ಸಹ ಆಟಗಾರರಿಗೆ ಕೋಚ್ ಗಳಿಗೂ ಅಭಿಮಾನಿಗಳಿಗೂ ಧನ್ಯವಾದ ತಿಳಿಸಿದ್ದಾರೆ. IPL ನಲ್ಲಿ ರಾಯಲ್ ಚಾಲೆಂಜರ್ಸ್ ತಂಡದ ಪರವಾಗಿ ಆಡುತ್ತಿದ್ದ ಸ್ಟೆಯ್ನ್ ಈ ವರ್ಷ ಐಪಿಎಲ್ ನಿಂದ ಹೊರಗುಳಿದಿದ್ದರು. ಸದ್ಯ ಸ್ಟಾರ್ ಬೌಲರ್ ನಿವೃತ್ತಿಯಿಂದ ಅಭಿಮಾನಿಗಳಿಗೆ ಭಾರಿ ನಿರಾಸೆ ಉಂಟಾಗಿದೆ.

 

ಸ್ಟೇನ್ 2004 ರಲ್ಲಿ ಇಂಗ್ಲೆಂಡ್ ವಿರುದ್ದದ ಟೆಸ್ಟ್​ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದರು. 2005 ರಲ್ಲಿ ಸೆಂಚೂರಿಯನ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾ ಇಲೆವೆನ್ ವಿರುದ್ಧ ಆಫ್ರಿಕಾ ಇಲೆವೆನ್ ಪರ ತಮ್ಮ ಮೊದಲ ಏಕದಿನ ಪಂದ್ಯವನ್ನು ಆಡಿದ್ದರು. ಹಾಗೆಯೇ ನ್ಯೂಜಿಲ್ಯಾಂಡ್ ವಿರುದ್ಧ ಟಿ20 ಪಾದಾರ್ಪಣೆ ಮಾಡಿದ್ದ ಸ್ಟೇನ್ ವೇಗದ ಅಸ್ತ್ರದೊಂದಿಗೆ ಹೊಸ ಸಂಚಲನ ಸೃಷ್ಟಿಸಿದ್ದರು. ದಶಕಗಳ ಕಾಲ ದಕ್ಷಿಣ ಆಫ್ರಿಕಾ ತಂಡದ ಖಾಯಂ ಸದಸ್ಯರಾಗಿದ್ದ ಸ್ಟೇನ್ ಕಳೆದ ಕೆಲ ವರ್ಷಗಳಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದರು.

ಕ್ರಿಕೆಟ್ ಜಗತ್ತು ಕಂಡ ಅತ್ಯಿತ್ತಮ ಬೌಲರ್‌ಗಳಲ್ಲಿ ಒಬ್ಬರಾದ ಡೇಲ್ ಸ್ಟೇಯ್ನ್ ಅವರು 93 ಟೆಸ್ಟ್‌ ಪಂದ್ಯಗಳಿಂದ 22.95 ಸರಾಸರಿಯಲ್ಲಿ 439 ವಿಕೆಟ್ ಪಡೆದಿದ್ದಾರೆ. ಫೆಬ್ರುವರು 2019ರಲ್ಲಿ ಕೊನೆಯ ಬಾರಿಗೆ ಟೆಸ್ಟ್ ಪಂದ್ಯ ಆಡಿದ್ದ ಸ್ಟೇಯ್ನ್, ಅದೇ ವರ್ಷದ ಆಗಸ್ಟ್‌ನಲ್ಲಿ ಟೆಸ್ಟ್‌ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದರು. 125 ಏಕದಿನ ಪಂದ್ಯಗಳನ್ನು ಆಡಿರುವ ಅವರು, 196 ವಿಕೆಟ್ ಪಡೆದಿದ್ದಾರೆ. 47 ಟಿ20 ಪಂದ್ಯಗಳಿಂದ 64 ವಿಕೆಟ್ ಉರುಳಿಸಿದ್ದಾರೆ. ಕಳೆದ ವರ್ಷದ ಫೆಬ್ರುವರಿಯಲ್ಲಿ ಕೊನೆಯ ಬಾರಿಗೆ ಏಕದಿನ ಪಂದ್ಯ ಆಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top