fbpx
ಸಮಾಚಾರ

ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವು ಪ್ರಕರಣ: ಕುಟುಂಬಕ್ಕೆ ಪರಿಹಾರ ಧನ ನೀಡಿದ ನಿರ್ಮಾಪಕ ಗುರು ದೇಶಪಾಂಡೆ

ಅಜಯ್ ರಾವ್ ಮತ್ತು ರಚಿತಾ ರಾಮ್ ನಟನೆಯ ‘ಲವ್ ಯೂ ರಚ್ಚು’ ಸಿನಿಮಾದ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವನ್ನಪ್ಪಿದ್ದರು. ಇದೀಗ ಆ ಸಂಬಂಧ ವಿವೇಕ್ ಮನೆಗೆ ಚಿತ್ರದ ನಿರ್ಮಾಪಕ ಗುರು ದೇಶಪಾಂಡೆ ಭೇಟಿ ನೀಡಿದ್ದಾರೆ.ಈ ವೇಳೆ 5 ಲಕ್ಷ ರೂ.ಗಳ ಪರಿಹಾರದ ಚೆಕ್ ಅನ್ನು ಸಹ ಅವರ ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ.

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ತಾವು ನಾಪತ್ತೆಯಾದ ವರದಿಗಳ ಕುರಿತು ಪ್ರತಿಕ್ರಿಯಿಸಿದ್ದಾರೆ. ‘‘ಪ್ರಕರಣದಿಂದಾಗಿ ನಾನು ತಲೆಮರೆಸಿಕೊಂಡು ಓಡಿಹೋಗಿರಲಿಲ್ಲ. ಕಾನೂನಾತ್ಮಕವಾಗಿ ಹೋರಾಟ ಮಾಡಬೇಕಾದ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಪಡೆದು ಹೊರಬಂದಿದ್ದೇನೆ’’ ಎಂದು ಅವರು ಹೇಳಿಕೆ ನೀಡಿದ್ದಾರೆ.

ಏನಿದು ಘಟನೆ:
ರಾಮನಗರ ತಾಲೂಕಿನ ಜೋಗನದೊಡ್ಡಿ ಬಳಿ ಗುರು ದೇಶಪಾಂಡೆ ನಿರ್ಮಾಣದ ‘ಲವ್​​ ಯೂ ರಚ್ಚು’ ಚಿತ್ರದ ಶೂಟಿಂಗ್​ ನಡೆಯುತ್ತಿತ್ತು. ಈ ವೇಳೆ ರೋಪ್​ ಎಳೆಯುವಾಗ ಫೈಟರ್​ ವಿವೇಕ್​ ಮೃತಪಟ್ಟಿದ್ದರು.​ ವಿದ್ಯುತ್​ ತಂತಿಗೆ ರೋಪ್ ಸ್ಪರ್ಶಿಸಿದ್ದು ಇದಕ್ಕೆ ಕಾರಣವಾಗಿತ್ತು. ಹೀಗಾಗಿ, ನಿರ್ದೇಶಕ ಶಂಕರಯ್ಯ, ಸಾಹಸ ನಿರ್ದೇಶಕ ವಿನೋದ್ ಕುಮಾರ್, ಕ್ರೇನ್ ಚಾಲಕ ಮಹದೇವ್ ಅವರನ್ನು ಬಂಧಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಚಿತ್ರದ ನಾಯಕ ನಟ ಅಜೇಯ್ ರಾವ್ ಮತ್ತು ನಾಯಕಿ ರಚಿತಾ ರಾಮ್ ಬಿಡದಿ ಸ್ಟೇಷನ್ ನಲ್ಲಿ ಹೇಳಿಕೆ ದಾಖಲಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top