fbpx
ಸಮಾಚಾರ

ಹಿರಿಯ ನಿರ್ದೇಶಕ ಮಣಿರತ್ನಂ ವಿರುದ್ಧ ಎಫ್ಐಆರ್ ದಾಖಲು

ತಮಿಳಿನ ಖ್ಯಾತ ಹಿರಿಯ ನಿರ್ದೇಶಕ ಮಣಿರತ್ನಂ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಮಣಿರತ್ನಂ ನಿರ್ದೇಶನದ ಐತಿಹಾಸಿಕ ಕಥೆಯನ್ನು ಆಧರಿಸಿದ ‘ಪೊನ್ನಿಯಿನ್ ಸೆಲ್ವನ್’ ಸಿನಿಮಾ ಶೂಟಿಂಗ್ ಸಮಯದಲ್ಲಿ ಅವಘಡ ನಡೆದಿದೆ. ಈ ಸಿನಿಮಾದ ಶೂಟಿಂಗ್ ಮಾಡುತ್ತಿರಬೇಕಾದರೆ ಕುದುರೆ ಸಾವನ್ನಪ್ಪಿದೆ. ಈ ಹಿನ್ನೆಲೆಯಲ್ಲಿ ಕುದುರೆಯ ಮಾಲೀಕರು ಮಣಿರತ್ನಂ ವಿರುದ್ಧ ಹೈದರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ.

ಸಿನಿಮಾ ಚಿತ್ರೀಕರಣ ಕಳೆದ ಕೆಲವು ದಿನಗಳ ನಡೆಯುತ್ತಿದೆ. ಆಗಸ್ಟ್​ 11ರಂದು ಕುದುರೆ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಆಗಸ್ಟ್​ 18ರಂದು ಎಫ್​ಐಆರ್​ ದಾಖಲಾಗಿದೆ. ಈ ಪ್ರಕರಣ ಬೆಳಕಿಗೆ ಬಂದಿದ್ದು ಮಾತ್ರ ನಿನ್ನೆ ಅಂದರೆ ಸೆ. 2ರಂದು. ದ ಅನಿಮಲ್ ವೆಲ್​ಫೇರ್ ಬೋರ್ಡ್​ ಆಫ್​ ಇಂಡಿಯಾ (AWBI) ಕುದುರೆ ಸಾವಿನ ಕುರಿತಾಗಿ ತನಿಖೆ ನಡೆಸಿ ವರದಿ ನೀಡುವಂತೆ ಹೈದರಾಬಾದ್​ನ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದೆ. ಜೊತೆಗೆ ತಪ್ಪುತಸ್ಥರಿಗೆ ಸೂಕ್ತವಾದ ಶಿಕ್ಷೆ ಆಗುವಂತೆ ಮಾಡಬೇಕೆಂದು ಆಗ್ರಹಿಸಿದೆ.

ಇನ್ನು ಅನಿಮಲ್ ವೆಲ್​ಫೇರ್ ಬೋರ್ಡ್​ ಆಫ್​ ಇಂಡಿಯಾ(AWBI) ಕುದುರೆ ಸಾವಿನ ಕುರಿತಾಗಿ ತನಿಖೆ ನಡೆಸಿ ವರದಿ ನೀಡುವಂತೆ ಹೈದರಾಬಾದ್​ನ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದೆ. ಜೊತೆಗೆ ತಪ್ಪಿತಸ್ಥರಿಗೆ ಸೂಕ್ತವಾದ ಶಿಕ್ಷೆ ಆಗುವಂತೆ ಮಾಡಬೇಕೆಂದು ಆಗ್ರಹಿಸಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top