fbpx
ಸಮಾಚಾರ

ಕೊಳ್ಳೇಗಾಲ ಶಾಸಕ ಎನ್.ಮಹೇಶ್‍ಗೆ ಪತ್ನಿ ನಿಧನ

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್ ಮಹೇಶ್ ಅವರ ಧರ್ಮಪತ್ನಿ ವಿಜಯ ಅವರು ಭಾನುವಾರ ರಾತ್ರಿ ವಿಧಿವಶರಾಗಿದ್ದಾರೆ. 65 ವರ್ಷದ ವಿಜಯ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆಂದು ತಿಳಿದುಬಂದಿದೆ

ಕೆಲವು ದಿನಗಳಿಂದ ವಿಜಯಾ ಅವರು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ ಭಾನುವಾರ ರಾತ್ರಿ ತೀವ್ರವಾಗಿ ಉಸಿರಾಟ ಸಮಸ್ಯೆ ಕಾಣಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಜೆ.ಪಿ ನಗರದ ಆರ್.ವಿ ಆಸ್ಟರ್ ಆಸ್ಪತ್ರೆಯಲ್ಲಿ ರಾತ್ರಿ 11. 30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಇವರಿಗೆ ಕ್ಯಾನ್ಸರ್ ನಾಲ್ಕನೇ ಹಂತದಲ್ಲಿತ್ತು. ಹೀಗಾಗಿ ಕಳೆದ ಒಂದೂವರೆ ತಿಂಗಳಿನಿಂದ ವಿಜಯಾ ಅವರು ಆರ್.ವಿ ಆಸ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲದೇ ಕೆಲವು ದಿನಗಳ ಹಿಂದೆಯಷ್ಟೇ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದರಿಂದ ವಿಜಯಾ ಅವರನ್ನು ಐಸಿಯುವಿನಿಂದ ಜನರಲ್ ವಾರ್ಡ್‍ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಭಾನುವಾರ ರಾತ್ರಿ ಆರೋಗ್ಯದಲ್ಲಿ ಏರು-ಪೇರು ಕಾಣಿಸಕೊಂಡು ಮೃತಪಟ್ಟಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top