fbpx
ಸಮಾಚಾರ

ಬಿಬಿಎಂಪಿ ನೇಮಕಾತಿ: 420 ಹುದ್ದೆಗಳು ಖಾಲಿ, ಆಸಕ್ತರು ಅರ್ಜಿ ಸಲ್ಲಿಸಬಹುದು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಖಾಲಿ ಇರುವ ಹುದ್ದೆಗಳನ್ನು ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ 1 ವರ್ಷದ ಅವಧಿಗೆ ಸಂಪೂರ್ಣ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ನೇರ ಸಂದರ್ಶನವನ್ನು ಆಯೋಜನೆ ಮಾಡಿದೆ.

ಹುದ್ದೆಗಳ ಹೆಸರು:
ಪುರುಷ ಆರೋಗ್ಯ ಕಾರ್ಯಕರ್ತರು, ಫಿಜಿಷಿಯನ್, ರೇಡಿಯೋಲಾಜಿಸ್ಟ್,
ಒಟಿ ಟೆಕ್ನಿಷಿಯನ್, ಸ್ಟಾಫ್ ನರ್ಸ್, ಫಾರ್ಮಾಸಿಸ್ಟ್, ಲ್ಯಾಬ್ ಟೆಕ್ನಿಷಿಯನ್,
ANM, ಲಸಿಕಾ ಮೇಲ್ವಿಚಾರಕರು, ಸೋಷಿಯಲಿಸ್ಟ್, ಮೆಡಿಕಲ್ ಆಫೀಸರ್,
ಆಫ್‌ಥಲ್ಮಿಕ್ ಅಸಿಸ್ಟಂಟ್, ಆಫ್‌ಥಲ್ಮಿಕ್ ಸರ್ಜನ್, ಕಮ್ಯೂನಿಟಿ ನರ್ಸ್,
ಸೋಶಿಯಲ್ ವರ್ಕರ್

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾತಿ, ಪ.ಪಂಗಡ, ವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯಸ್ಸು ನಿಗದಿಪಡಿಸಲಾಗಿದೆ.

ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಜ್ಞಾನದ ಅವಶ್ಯಕತೆ ಕಡ್ಡಾಯವಾಗಿರುತ್ತದೆ. ವಿವಿಧ ಹುದ್ದೆಗಳಿಗೆ ಬೇರೆ ಬೇರೆ ದಿನಾಂಕದಂದು ಸಂದರ್ಶನ ನಡೆಯಲಿದ್ದು, ಈ ವೇಳಾಪಟ್ಟಿ ಚೆಕ್‌ ಮಾಡಲು ವೆಬ್‌ಸೈಟ್‌ https://bbmp.gov.in ಗೆ ಭೇಟಿ ನೀಡಲು ಸೂಚಿಸಲಾಗಿದೆ.

ಆಸಕ್ತರು ಸಂಬಂಧಿಸಿದ ಮೂಲ ದಾಖಲೆಗಳೊಂದಿಗೆ ಅಭ್ಯರ್ಥಿಗಳು ಪಟ್ಟಿಯಲ್ಲಿ ಸೂಚಿಸಿರುವ ಸ್ಥಳ ಮತ್ತು ದಿನಾಂಕದಂದು ವಾಕ್‌ ಇನ್‌ ಇಂಟರ್‌ವ್ಯೂಗೆ ಹಾಜರಾಗಲು ಸೂಚಿಸಲಾಗಿದೆ. ಮೇಲ್ಕಂಡ ಹುದ್ದೆಯ ಸಂಖ್ಯೆಗಳನ್ನು ಹೆಚ್ಚಿಸುವ / ಕಡಿತಗೊಳಿಸುವ ಅಧಿಕಾರವನ್ನು ಬೆಂಗಳೂರು ನಗರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಹೊಂದಿರುತ್ತದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 080-22110445 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಪಾಲಿಕೆಯ ವೆಬ್‌ ಸೈಟ್‌ http://bbmp.gov.in ನಂಬರ್ ಸಂಪರ್ಕಿಸಲು ಕೋರಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top