fbpx
ಮನೋರಂಜನೆ

ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ಮಾತೃವಿಯೋಗ: ಅಕ್ಷಯ್ ಕುಮಾರ್ ತಾಯಿ ಇನ್ನಿಲ್ಲ

ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ತಾಯಿ ಅರುಣಾ ಭಾಟಿಯಾ ಇಂದು ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯ ಕಾರಣದಿಂದ ಸೆಪ್ಟೆಂಬರ್ 3ರಂದು ಅವರನ್ನು ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರ ಆರೋಗ್ಯ ಸ್ಥಿತಿಯಲ್ಲಿದ್ದ ಅವರಿಗೆ ಆಸ್ಪತ್ರೆಯ ವೈದ್ಯರು ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದರು.

ಟ್ವೀಟ್‌ರ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅಕ್ಷಯ್ ಕುಮಾರ್, ”ಆಕೆ ನನ್ನ ಬೇರಾಗಿದ್ದಳು. ನಾನು ಇಂದು ತಡೆದುಕೊಳ್ಳಲಾಗದಷ್ಟು ದುಃಖದಲ್ಲಿದ್ದೇನೆ. ನನ್ನ ತಾಯಿ ಶ್ರೀಮತಿ ಅರುಭಾ ಭಾಟಿಯಾ ಇಂದು ಮುಂಜಾನೆ ಶಾಂತವಾಗಿ ಈ ಲೋಕವನ್ನು ಬಿಟ್ಟು ಹೋಗಿದ್ದಾಳೆ. ಆಕೆ ಬೇರೆ ಲೋಕದಲ್ಲಿ ನನ್ನ ತಂದೆಯನ್ನು ಸೇರಿಕೊಂಡಿದ್ದಾಳೆ. ಕಠಿಣ ಸಮಯದಲ್ಲಿ ನನ್ನ ಕುಟುಂಬದ ಪರವಾಗಿ ಪ್ರಾರ್ಥನೆ ಮಾಡಿದ ಎಲ್ಲರಿಗೂ ಧನ್ಯವಾದ, ಓಂ ಶಾಂತಿ” ಎಂದಿದ್ದಾರೆ.

ಅನೇಕ ದಿನಗಳಿಂದ ಅನಾರೊಗ್ಯ ಸಮಸ್ಯೆ ಎದುರಿಸುತ್ತಿದ್ದ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಕಳೆದೆರಡು ದಿನಗಳ ಹಿಂದೆ ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ತಮ್ಮ ‘ಸಿಂಡ್ರೆಲಾ’ ಸಿನಿಮಾ ಶೂಟಿಂಗ್​ಗಾಗಿ ಇಂಗ್ಲೆಂಡ್​ ಪ್ರವಾಸದಲ್ಲಿದ್ದ ಅಕ್ಷಯ್ ಕುಮಾರ್ ತಾಯಿಯ ಆರೋಗ್ಯ ವಿಚಾರಿಸಲು ಮುಂಬೈಗೆ ದೌಡಾಯಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top