fbpx
ಸಮಾಚಾರ

ಅಪೋಲೋ ಆಸ್ಪತ್ರೆಯಿಂದ ನಟ ಸಾಯಿ ಧರಮ್ ತೇಜ್ ಹೆಲ್ತ್ ಬುಲೆಟಿನ್ ಬಿಡುಗಡೆ

ಮೆಗಾಸ್ಟಾರ್ ಚಿರಂಜೀವಿ ಅವರ ಅಳಿಯ ತೆಲುಗು ನಟ ಸಾಯಿ ಧರಂ ತೇಜ್ ಅವರು ಚಲಾಯಿಸುತ್ತಿದ್ದ ಸ್ಪೋರ್ಟ್ಸ್ ಬೈಕ್ ಕಳೆದ ರಾತ್ರಿ ಹೈದರಾಬಾದ್ ನ ದುರ್ಗಮ್ ಚೆರುವು ಕೇಬಲ್ ಸೇತುವೆ ಬಳಿ ಅಪಘಾತಕ್ಕೀಡಾಗಿ ನಟ ಈಗ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿರಂಜೀವಿ ಕುಟುಂಬಕ್ಕೆ ನಿನ್ನೆ ಗಣೇಶ ಹಬ್ಬದ ದಿನವೇ ಆಘಾತವನ್ನುಂಟುಮಾಡಿದೆ. ಚಿರಂಜೀವಿ, ನಟ ಪವನ್ ಕಲ್ಯಾಣ, ನಿರ್ಮಾಪಕ ಅಲ್ಲು ಅರವಿಂದ್ ಸೇರಿದಂತೆ ಇಡೀ ಕುಟುಂಬಸ್ಥರು ಆಸ್ಪತ್ರೆಗೆ ಧಾವಿಸಿ ನಟನ ಆರೋಗ್ಯ ವಿಚಾರಿಸುತ್ತಿದ್ದಾರೆ. ಅಭಿಮಾನಿಗಳಲ್ಲಿ ಕೂಡ ಆತಂಕ ಮನೆ ಮಾಡಿದೆ.

ಬೈಕ್ ಅಪಘಾತಕ್ಕೀಡಾಗಿ ಗಂಭೀರ ಸ್ಥಿತಿಯಲ್ಲಿದ್ದ ಟಾಲಿವುಡ್ ನಟ ಸಾಯಿಧರ್ಮ ತೇಜ್ ಆರೋಗ್ಯ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಹೆಲ್ತ್ ಬುಲೆಟಿನ್‌ನಲ್ಲಿ ವೈದ್ಯರು ಹೇಳಿರುವುದೇನು?
‘’ರಸ್ತೆ ಅಪಘಾತದ ಬಳಿಕ ಸಾಯಿ ಧರಮ್ ತೇಜ್ ಅವರನ್ನು ಜ್ಯೂಬ್ಲಿ ಹಿಲ್ಸ್‌ನ ಅಪೋಲೋ ಆಸ್ಪತ್ರೆಗೆ ಕರೆತರಲಾಯಿತು. ಅಪಘಾತದ ಬಳಿಕ ಹತ್ತಿರದ ಆಸ್ಪತ್ರೆಯಲ್ಲಿ ಉಸಿರಾಟದ ವ್ಯವಸ್ಥೆಯನ್ನು ಮಾಡಿದ ಬಳಿಕ ಅವರನ್ನು ಅಪೋಲೋ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಸದ್ಯ ಸಾಯಿ ಧರಮ್ ತೇಜಾ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಮೆದುಳು, ಸ್ಪೈನ್ ಸೇರಿದಂತೆ ಇತರೆ ಅಂಗಾಂಗಗಳಿಗೆ ಗಂಭೀರ ಪಟ್ಟಾಗಿಲ್ಲ. ಅವರಿಗೆ ಸಾಫ್ಟ್ ಟಿಶ್ಯೂ ಇಂಜ್ಯುರಿ ಮತ್ತು ಕಾಲರ್ ಬೋನ್ ಫ್ರ್ಯಾಕ್ಚರ್ ಆಗಿದೆ. ಅವರಿಗೆ ತುರ್ತು ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲ’’ ಎಂದು ಹೆಲ್ತ್ ಬುಲೆಟಿನ್‌ನಲ್ಲಿ ವೈದ್ಯರು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಟ ಚಿರಂಜೀವಿ, ವೈದ್ಯರು ತಿಳಿಸಿರುವಂತೆ ಆತಂಕ ಪಡುವ ಅಗತ್ಯವಿಲ್ಲ. ಚಿಕಿತ್ಸೆ ಮುಂದುವರಿದಿದೆ. ಮುಂದಿನ ಕೆಲ ದಿನಗಳಲ್ಲಿ ಆತ ಸಹಜ ಸ್ಥಿತಿಗೆ ಮರಳುತ್ತಾನೆ ಎಂದು ಅಭಿಮಾನಿಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top