fbpx
ಸಮಾಚಾರ

ಹಾಸ್ಯನಟ ರಾಜು ತಾಳಿಕೋಟೆ ವಿರುದ್ಧ ಹಲ್ಲೆ, ಬಲವಂತವಾಗಿ ವಿಷ ಕುಡಿಸಿದ ಆರೋಪ: ದೂರು ದಾಖಲು

ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ವಿರುದ್ಧ ಸೋದರಳಿಯನ ಪತ್ನಿ ಮೇಲೆ ಹಲ್ಲೆ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಕೌಟುಂಬಿಕ ಕಲಹದಿಂದಾಗಿ, ಅಕ್ಕನ ಪುತ್ರ ಫಯಾಜ್ ಕರಜಗಿ ಪರವಾಗಿ ನಿಂತು ರಾಜು ಅವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಫಯಾಜ್ ಅವರ ಪತ್ನಿಯ ಮೇಲೆ ಹಲ್ಲೆ ನಡೆಸಿ, ಬಲವಂತಾಗಿ ವಿಷ ಕುಡಿಸಿರುವ ಆರೋಪ ಮಾಡಲಾಗಿದ್ದು.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಸನಾ ಕರಜಗಿ ಅವರ ತಾಯಿ ಫಾತಿಮಾ ಶಿರಹಟ್ಟಿ ವಿಜಯಪುರ ಮಹಿಳಾ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜು ತಾಳಿಕೋಟೆ, ಪತ್ನಿ ಪ್ರೇಮಾ ತಾಳಿಕೋಟೆ, ಫಯಾಜ್ ಕರಜಗಿ, ಸನಾ ಭಾವ ಪಿಂಟು ಸೇರಿ ಆರು ಜನರ ವಿರುದ್ಧ ದೂರು ದಾಖಲಾಗಿದೆ.

ರಾಜು ತಾಳಿಕೋಟೆ ಸುದ್ದಿಗಾರರೊಂದಿಗೆ ಮಾತನಾಡಿ, ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ಸನಾ ಸಂಬಂಧಿಕರು ತಮ್ಮ ಮೇಲೆ ಹಲ್ಲೆ ನಡೆಸಿ, ಪಿಸ್ತೂಲ್ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ರಾಜು ತಾಳಿಕೋಟೆ ಆರೋಪಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟಂತೆ, ಸನಾ ಕರಜಗಿ ಸಂಬಂಧಿಕ ಎಸ್.ಕೆ ಮೋದಿ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡುವುದಾಗಿ ಅವರು ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top