fbpx
ಸಮಾಚಾರ

ಸ್ಯಾಂಡಲ್​ವುಡ್​ನ ಜನಪ್ರಿಯ ಡೈಲಾಗ್​ ವ್ರೈಟರ್​ ಗುರು ಕಶ್ಯಪ್​ ಇನ್ನಿಲ್ಲ

ಕನ್ನಡ ಚಿತ್ರರಂಗದ ಜನಪ್ರಿಯ ಡೈಲಾಗ್ ರೈಟರ್ ಗುರು ಕಶ್ಯಪ್ ನಿಧನರಾಗಿದ್ದಾರೆ. ಸೋಮವಾರ (ಸೆಪ್ಟೆಂಬರ್ 13) ರಾತ್ರಿ ಗುರು ಕಶ್ಯಪ್ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಗುರು ಕಶ್ಯಪ್ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಆಸ್ಪತ್ರೆಗೆ ಹೋಗುವಾಗ ದಾರಿ ಮಧ್ಯದಲ್ಲೇ ಗುರು ಕಶ್ಯಪ್ ವಿಧಿವಶರಾದರು ಎಂಬ ಮಾಹಿತಿ ಲಭ್ಯವಾಗಿದೆ. ಅವರಿಗೆ 45 ವರ್ಷ ವಯಸ್ಸಾಗಿತ್ತು.

15ಕ್ಕೂ ಹೆಚ್ಚು ಸಿನಿಮಾಗಳಿಗೆ ಗುರು ಕಶ್ಯಪ್​ ಕೆಲಸ ಮಾಡಿದ್ದರು. ನಿಧನಕ್ಕೂ ಮುನ್ನ ಅನೇಕ ಪ್ರಾಜೆಕ್ಟ್​ಗಳಲ್ಲಿ ತೊಡಗಿಕೊಂಡಿದ್ದರು. ಡಾಲಿ ಧನಂಜಯ ನಟನೆಯ ‘ಮಾನ್ಸೂನ್​ ರಾಗ’, ಶಿವರಾಜ್​ಕುಮಾರ್​ ಅಭಿನಯದ ‘ಬೈರಾಗಿ’, ‘ವ್ಹೀಲ್​ ಚೇರ್​ ರೋಮಿಯೋ’ ಮುಂತಾದ ಸಿನಿಮಾಗಳಿಗೆ ಅವರು ಡೈಲಾಗ್​ ಬರೆಯುತ್ತಿದ್ದರು. ಆ ಸಿನಿಮಾಗಳು ತೆರೆಕಾಣುವುದಕ್ಕೂ ಮುನ್ನವೇ ಅವರು ನಿಧನರಾಗಿದ್ದಾರೆ. ಪತ್ನಿ ಮತ್ತು ಮಗಳನ್ನು ಗುರು ಕಶ್ಯಪ್​ ಅಗಲಿದ್ದಾರೆ.

ಗುರು ಕಶ್ಯಪ್​ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ‘ಗುರು ದೇವರಂಥ ಮನುಷ್ಯ ಆಗಿದ್ದರು. ಅತ್ಯುತ್ತಮ ಸಂಭಾಷಣಕಾರನನ್ನು ಚಂದನವನ ಇಂದು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ‘ಪುಷ್ಪಕ ವಿಮಾನ’ ನಿರ್ದೇಶಕ ರವೀಂದ್ರನಾಥ್​ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top