fbpx
ಸಮಾಚಾರ

ದೀಪಾವಳಿಗೆ ರಾಜಧಾನಿಯಲ್ಲಿ ಪಟಾಕಿ ಸಂಪೂರ್ಣ ನಿಷೇಧ

ಕಳೆದ ಮೂರು ವರ್ಷಗಳಿಂದ ದೀಪಾವಳಿಯಲ್ಲಿ ದೆಹಲಿಯ ವಾಯು ಮಾಲಿನ್ಯದ ಆತಂಕಕಾರಿ ಮಟ್ಟಕ್ಕೇರಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಎಲ್ಲಾ ರೀತಿಯ ಪಟಾಕಿಗಳ ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣ ನಿಷೇಧಿಸುವುದಾಗಿ ಘೋಷಿಸಿದ್ದಾರೆ. ಜನರ ಜೀವ ಉಳಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದೂ ಹೇಳಿದ್ದಾರೆ.

ಇಂದು ಟ್ವಿಟ್ಟರ್ ಮೂಲಕ ಸರ್ಕಾರದ ನಿರ್ಧಾರ ತಿಳಿಸಿದ್ದು, ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿಯಲ್ಲಿ ಮಾಲಿನ್ಯದ ಪ್ರಮಾಣ ತಗ್ಗಿಸುವ ಸಂಬಂಧ ಅರವಿಂದ್ ಕೇಜ್ರಿವಾಲ್, ಪರಿಸರ ಸಚಿವ ಗೋಪಾಲ್ ರಾಯ್ ಇಂದು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಜೊತೆಗೆ ಸಭೆ ನಡೆಸಿದರು. ಸಭೆಯ ಬಳಿಕ ಪಟಾಕಿ ನಿಷೇಧಿಸಲು ತೀರ್ಮಾನಿಸಲಾಯಿತು.

ದೆಹಲಿಯಲ್ಲಿ ವಾಯು ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿರುವ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಪಟಾಕಿ ಹಚ್ಚುವುದಕ್ಕೆ ನಿಷೇಧ ಹೇರಲಾಗಿತ್ತು. ಈ ನಿಷೇಧ ಈ ವರ್ಷವೂ ಮುಂದುವರೆಯಲಿದೆ. ಅಲ್ಲದೆ ಸಂಪೂರ್ಣ ನಿಷೇಧದ ದೃಷ್ಟಿಯಿಂದ ಪಟಾಕಿಗಳನ್ನು ಸಂಗ್ರಹಿಸಬೇಡಿ ಎಂದು ನಾನು ವ್ಯಾಪಾರಿಗಳಿಗೆ ಮನವಿ ಮಾಡುತ್ತೇನೆ ಎಂದು ಕೇಜ್ರಿವಾಲ್ ತಮ್ಮ ಟ್ವೀಟ್ ನಲ್ಲಿ ಮನವಿ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top