fbpx
ಸಮಾಚಾರ

ಅಭಿಮಾನಿಗಳಿಗೆ ಕಹಿ ಸುದ್ದಿ ನೀಡಿದ ಉಪೇಂದ್ರ: ನಿರಾಸೆಯಲ್ಲಿ ಉಪ್ಪಿ ಫ್ಯಾನ್ಸ್

ಪ್ರತಿ ವರ್ಷ ಸೆಪ್ಟೆಂಬರ್ 18 ಬಂತು ಅಂದ್ರೆ ‘ರಿಯಲ್ ಅಭಿಮಾನಿ’ಗಳಲ್ಲಿ ಸಡಗರ ಸಂಭ್ರಮ ತುಂಬಿ ತುಳುಕುತ್ತಿರುತ್ತಿತ್ತು. ಆದರೆ, ಮಾರಣಾಂತಿಕ ಕೋವಿಡ್ ಶುರುವಾದಾಗಿನಿಂದ ಯಾವ ತಾರೆಯರೂ ಕೂಡ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆಗೆ ಸಾರ್ವಜನಿಕವಾಗಿ ಆಚರಿಸಿಕೊಳ್ಳುತ್ತಿಲ್ಲ.

 

 

ಅಂತೆಯೇ ರಿಯಲ್ ಸ್ಟಾರ್ ಉಪೇಂದ್ರ ಕೂಡ ತಮ್ಮ ಫ್ಯಾನ್ಸ್ ಜೊತೆಗೆ ಬರ್ತಡೇ ಸೆಲೆಬ್ರೇಟ್ ಮಾಡಿಕೊಂಡಿಲ್ಲ. ಈ ವರ್ಷವೂ ಅಭಿಮಾನಿಗಳ ಜೊತೆಗಿನ ತಮ್ಮ ಹುಟ್ಟುಹಬ್ಬ ಆಚರಣೆಗೆ ರಿಯಲ್ ಸ್ಟಾರ್ ಉಪೇಂದ್ರ ಬ್ರೇಕ್ ಹಾಕಿದ್ದಾರೆ. ‘’ಈ ವರ್ಷವೂ ಅಭಿಮಾನಿಗಳ ಜೊತೆಗೆ ಸಂಭ್ರಮ ಇರುವುದಿಲ್ಲ’’ ಎಂಬ ಬೇಸರದ ಸುದ್ದಿಯನ್ನು ಅಭಿಮಾನಿಗಳಿಗೆ ನೀಡಿದ್ದಾರೆ ಉಪೇಂದ್ರ.

‘ಅಭಿಮಾನಿಗಳ ದಿನ, 18-09-2021. ಪ್ರತಿವರ್ಷ ಅಭಿಮಾನಿಗಳೊಂದಿಗೆ ಆಚರಿಸುತ್ತಿದ್ದ ಅಭಿಮಾನಿಗಳ ದಿನದ ಸಂಭ್ರಮ ಈ ವರ್ಷವೂ ಆಚರಿಸಲು ಆಗದಿರುವುದಕ್ಕೆ ವಿಷಾದಿಸುತ್ತೇನೆ. ನಾನು ಬೆಂಗಳೂರಿನಲ್ಲಿ ಇಲ್ಲದಿರುವ ಕಾರಣ ಎಲ್ಲಾ ಅಭಿಮಾನಿಗಳು ಅವರವರು ಇರುವ ಕಡೆಯೇ ಸರಳವಾಗಿ ಈ ದಿನವನ್ನು ಆಚರಿಸಿ ಹಾರೈಸಬೇಕಾಗಿ ಬಯಸುತ್ತೇನೆ’ ಎಂದು ಸೋಶಿಯಲ್​ ಮೀಡಿಯಾದಲ್ಲಿ ಉಪ್ಪಿ ಪೋಸ್ಟ್​ ಮಾಡಿದ್ದಾರೆ. ಸದ್ಯ ಕೊರೊನಾ ಹಾವಳಿ ಮುಗಿದಿಲ್ಲ. ಹಾಗಾಗಿ ಅವರು ಎಲ್ಲರ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top