fbpx
ಸಮಾಚಾರ

ಮಗನ ಜೊತೆ ಫೋಟೋಗೆ ಪೋಸ್ ಕೊಟ್ಟ ನಿಖಿಲ್ – ಇಲ್ಲಿದೆ ನೋಡಿ ದೇವೇಗೌಡರ ಕುಟುಂಬದ ಕುಡಿಯ ಪೋಟೋಸ್

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದ ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ ಅವರ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಖಿಲ್ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ.

ಮಗು ಮತ್ತು ತಾಯಿ ಇಬ್ಬರು ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಇನ್ನು ತಂದೆಯಾದ ಖುಷಿಯಲ್ಲಿರುವ ನಿಖಿಲ್ ಮುದ್ದು ಮಗನ ಎತ್ತಿ ಮುದ್ದಾಡಿದ್ದಾರೆ. ಮಗನ ಜೊತೆಗೆ ಫೋಟೋಗಳನ್ನ ತೆಗೆಸಿಕೊಂಡಿದ್ದಾರೆ. ಮಗನನ್ನು ಎತ್ತಿಕೊಂಡಿರುವ ನಿಖಿಲ್ ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿವೆ.

2020ರ ಏಪ್ರಿಲ್​ನಲ್ಲಿ ರೇವತಿ ಜೊತೆ ನಿಖಿಲ್​ ಕುಮಾರಸ್ವಾಮಿ ಸಪ್ತಪದಿ ತುಳಿದಿದ್ದರು. ಲಾಕ್​ಡೌನ್​ ನಿಯಮಗಳ ಅನುಸಾರ ಈ ಹೈಪ್ರೊಫೈಲ್​ ಕುಟುಂಬದಲ್ಲಿ ವಿವಾಹ ಸಮಾರಂಭ ನೆರವೇರಿತ್ತು. ಬಿಡದಿ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ರೇವತಿ ಮತ್ತು ನಿಖಿಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇತ್ತೀಚಿಗಷ್ಟೇ ರೇವತಿಯವರಿಗೆ ಅದ್ದೂರಿ ಸೀಮಂತ ಕಾರ್ಯಕ್ರಮವನ್ನು ಮಾಡಲಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top