fbpx
ಸಮಾಚಾರ

IPL 2021:ನಿಷೇಧದ ಭೀತಿಯಲ್ಲಿ ರಾಜಸ್ತಾನ್ ನಾಯಕ ಸಂಜು ಸ್ಯಾಮ್ಸನ್

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ 33 ರನ್ ಅಂತರದ ಸೋಲಿಗೆ ಶರಣಾಗಿತ್ತು. ಇದರೊಂದಿಗೆ ನಿಧಾನಗತಿಯ ಓವರ್‌ರೇಟ್‌ಗಾಗಿ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಮೇಲೆ ₹24 ಲಕ್ಷ ದಂಡ ಹೇರಲಾಗಿದೆ.

ಡೆಲ್ಲಿ ಎದುರು ಶನಿವಾರ ನಡೆದ ಪಂದ್ಯದಲ್ಲಿ ನಿಧಾನಗತಿಯಲ್ಲಿ ಬೌಲಿಂಗ್‌ ಮಾಡಿದ ಕಾರಣ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್‌ಗೆ 24 ಲಕ್ಷ ರುಪಾಯಿ ದಂಡ ಹಾಗೂ ಆಡುವ ಹನ್ನೊಂದರ ಬಳಗದಲ್ಲಿದ್ದ ಇನ್ನು 10 ಆಟಗಾರರಿಗೆ ತಲಾ 6 ಲಕ್ಷ ರುಪಾಯಿ ಇಲ್ಲವೇ ಪಂದ್ಯದ ಸಂಭಾವನೆಯ 25% ರಷ್ಟನ್ನು ದಂಡದ ರೂಪದಲ್ಲಿ ಶಿಕ್ಷೆ ವಿಧಿಸಲಾಗಿದೆ.

ಈ ಮೊದಲು ಪಂಜಾಬ್‌ ಕಿಂಗ್ಸ್‌ ವಿರುದ್ದದ ಪಂದ್ಯದ ವೇಳೆಯು ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ ರಾಯಲ್ಸ್‌ ನಿಧಾನಗತಿಯ ಬೌಲಿಂಗ್ ಮಾಡಿತ್ತು. ಹೀಗಾಗಿ ತಂಡದ ನಾಯಕ ಸಂಜು ಸ್ಯಾಮ್ಸನ್‌ಗೆ 12 ಲಕ್ಷ ರುಪಾಯಿ ದಂಡ ವಿಧಿಸಲಾಗಿತ್ತು. ಇದೀಗ ಎರಡನೇ ಬಾರಿಗೆ ಸಂಜು ದಂಡ ತೆತ್ತಿದ್ದಾರೆ.

ಐಪಿಎಲ್ ಫ್ರಾಂಚೈಸಿ ಅಗತ್ಯವಿರುವ ಬೌಲಿಂಗ್ ದರವನ್ನು ಕಾಯ್ದುಕೊಳ್ಳಲು ವಿಫಲವಾಗಿರುವುದು ಇದು ಎರಡನೇ ಬಾರಿಯಾಗಿದೆ. .ಒಂದು ವೇಳೆ ಮೂರನೇ ಬಾರಿಯೂ ಹಾಗೆ ಆದಲ್ಲಿ ಸಂಜು ಸ್ಯಾಮ್ಸನ್ ಅವರನ್ನು ಒಂದು ಪಂದ್ಯದಿಂದ ನಿಷೇಧಿಸಲಾಗುತ್ತದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top