fbpx
ಸಮಾಚಾರ

ಪಾಕ್ ಮಾಜಿ ಕ್ರಿಕೆಟಿಗ ಇಂಜಮಾಮ್ ಉಲ್ ಹಕ್ ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಪಾಕಿಸ್ತಾನದ ಮಾಜಿ ನಾಯಕ ಮತ್ತು ಅವರ ಸಾರ್ವಕಾಲಿಕ ಬ್ಯಾಟಿಂಗ್ ಶ್ರೇಷ್ಠರಲ್ಲಿ ಒಬ್ಬರಾದ ಇಂಜಮಾಮ್ ಉಲ್ ಹಕ್ ಅವರು ಹೃದಯಾಘಾತಕ್ಕೆ ಒಳಗಾಗಿದ್ದಾರೆ. ನಿನ್ನೆ ಅವರನ್ನು ಲಾಹೋರ್ ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಯಶಸ್ವಿಯಾಗಿ ಆಂಜಿಯೋಪ್ಲಾಸ್ಟಿ ಸರ್ಜರಿ ಮಾಡಲಾಗಿದೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ಇಂಜಮಾಮ್ ಅವರಿಗೆ ಕಳೆದ ಮೂರು ದಿನಗಳಿಂದ ಎದೆ ನೋವು ಕಾಣಿಸಿಕೊಳ್ಳುತ್ತಿತ್ತು ಆರಂಭಿಕ ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಲಾಗಿತ್ತು. ಆದರೆ ಸೋಮವಾರದ ಪರೀಕ್ಷೆಗಳಲ್ಲಿ ಅವರು ಹೃದಯಾಘಾತಕ್ಕೆ ಒಳಗಾಗಿದ್ದಾರೆ ಮತ್ತು ಶಸ್ತ್ರಚಿಕಿತ್ಸೆಗೆ ತುರ್ತಾಗಿ ಹೋಗಬೇಕಾಯಿತು.

51 ವರ್ಷದ ಇಂಜಮಾಮ್ ಪಾಕಿಸ್ತಾನದ ಪರವಾಗಿ ಅತೀ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದಾರೆ, ಅವರು 375 ಏಕದಿನ ಪಂದ್ಯಗಳಲ್ಲಿ 11701 ರನ್ ಗಳಿಸಿದ್ದು 119 ಟೆಸ್ಟ್ ಪಂದ್ಯಗಳಲ್ಲಿ 8829 ರನ್ ಗಳಿಸಿದ್ದಾರೆ. ಅವರು 2007 ರಲ್ಲಿ ಅಂತರಾಷ್ಟ್ರೀಯ ಆಟದಿಂದ ನಿವೃತ್ತರಾದರು

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top