fbpx
ಸಮಾಚಾರ

ಹಿರಿಯ ನಟ ಸತ್ಯಜಿತ್ ಸ್ಥಿತಿ ಗಂಭೀರ: ಐಸಿಯು ನಲ್ಲಿ ಚಿಕಿತ್ಸೆ

ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್​ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ಬೆಂಗಳೂರಿನ ಬೌರಿಂಗ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಸತ್ಯಜಿತ್​ ಪರಿಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ದಿನದಿಂದ ದಿನಕ್ಕೆ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಅವರ ಪುತ್ರ ಮಾಹಿತಿ ನೀಡಿದ್ದಾರೆ. ಸತ್ಯಜಿತ್ ಅವರಿಗೆ ಗ್ಯಾಂಗ್ರಿನ್ ನಿಂದಾಗಿ ಈಗಾಗಲೇ ಒಂದು ಕಾಲು ತೆಗೆಯಲಾಗಿತ್ತು. ಮಧುಮೇಹ ಹಾಗೂ ಇನ್ನಿತರ ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಹಿರಿಯ ನಟ ಹಲವು ದಿನಗಳಿಂದ ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ.

ಅಂದಹಾಗೆ ಸತ್ಯಜಿತ್ ಅವರ ಮೂಲ ಹೆಸರು ಸಯ್ಯದ್ ನಿಜಾಮುದ್ದೀನ್. ನಟನೆಯಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ಸತ್ಯಜಿತ್ 650ಕ್ಕೂ ಅಧಿಕ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಒಂದ್ಕಾಲದಲ್ಲಿ ಬಹುಬೇಡಿಕೆ ಪೋಷಕ ನಟನಾಗಿ ಸತ್ಯಜಿತ್ ಗುರುತಿಸಿಕೊಂಡಿದ್ದರು. ನೆಗೆಟಿವ್ ಪಾತ್ರ ಕೊಟ್ಟರೂ, ಅಷ್ಟೇ ಖಡಕ್ ಆಗಿ ಸತ್ಯಜಿತ್ ಅಭಿನಯಿಸುತ್ತಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top