fbpx
ಸಮಾಚಾರ

ಹಿರಿಯ ನಟ ಸತ್ಯಜಿತ್ ಆರೋಗ್ಯ ಮತ್ತಷ್ಟು ಗಂಭೀರ

ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಟ ಸತ್ಯಜಿತ್ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ. ಕಳೆದ 6 ದಿನಗಳಿಂದ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾರ್ಟ್ ರೇಟ್ ಕಡಿಮೆಯಾಗಿದೆ. ಜೊತೆಗೆ ಇಂಟರ್ನಲ್ ಬ್ಲೀಡಿಂಗ್ ಕೂಡ ಆಗುತ್ತಿದೆ. ಹೀಗಾಗಿ ಮತ್ತೆ ವೆಂಟಿಲೇಟರ್ ಸಪೋರ್ಟ್ ನೀಡಲಾಗಿದೆ. ಮೊನ್ನೆವರೆಗೂ ಮಾತನಾಡುತ್ತಿದ್ದರು, ಆದರೆ ನಿನ್ನೆಯಿಂದ ಮತ್ತೆ ಆರೋಗ್ಯ ಕ್ಷೀಣಿಸಿದೆ.

ಸತ್ಯಜಿತ್​ ಹಲವು ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಗ್ಯಾಂಗ್ರಿನ್​ನಿಂದಾಗಿ ಅವರ ಒಂದು ಕಾಲು ಕತ್ತರಿಸಲಾಗಿತ್ತು. ಈಗ ಸಕ್ಕರೆ ಕಾಯಿಲೆ ಮತ್ತು ಇನ್ನಿತರೆ ವಯೋಸಹಜ ಅನಾರೋಗ್ಯದ ಕಾರಣ ಸತ್ಯಜಿತ್​ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿದೆ. ಹಲವು ದಿನಗಳಿಂದ ಸತ್ಯಜಿತ್​ಗೆ ಆರೋಗ್ಯ ಕೈಕೊಟ್ಟಿದ್ದರಿಂದ ಅವರಿಗೆ ಆರ್ಥಿಕ ಸಂಕಷ್ಟ ಕೂಡ ಎದುರಾಗಿದೆ.​

ಅಂದಹಾಗೆ ಸತ್ಯಜಿತ್ ಅವರ ಮೂಲ ಹೆಸರು ಸಯ್ಯದ್ ನಿಜಾಮುದ್ದೀನ್. ನಟನೆಯಲ್ಲಿ ಆಸಕ್ತಿ ಬೆಳೆಸಿಕೊಂಡಿದ್ದ ಸತ್ಯಜಿತ್ 650ಕ್ಕೂ ಅಧಿಕ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಒಂದ್ಕಾಲದಲ್ಲಿ ಬಹುಬೇಡಿಕೆ ಪೋಷಕ ನಟನಾಗಿ ಸತ್ಯಜಿತ್ ಗುರುತಿಸಿಕೊಂಡಿದ್ದರು. ನೆಗೆಟಿವ್ ಪಾತ್ರ ಕೊಟ್ಟರೂ, ಅಷ್ಟೇ ಖಡಕ್ ಆಗಿ ಸತ್ಯಜಿತ್ ಅಭಿನಯಿಸುತ್ತಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top